ರೆಬೆಲ್ ಸ್ಟಾರ್ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಚಿತ್ರದ ‘ಸಹನಾ ಸಹನಾ…’ ಹಾಡು ಬಿಡುಗಡೆ
ಹೈದರಾಬಾದ್: ರೆಬೆಲ್ ಸ್ಟಾರ್ ಪ್ರಭಾಸ್, ನಿರ್ದೇಶಕ ಮಾರುತಿ ಮತ್ತು ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಕಾಂಬಿನೇಷನ್ನಲ್ಲಿ ಸಿದ್ಧವಾಗುತ್ತಿರುವ ಬಹುನಿರೀಕ್ಷಿತ ಚಿತ್ರ ‘ದಿ ರಾಜಾ ಸಾಬ್’ ಚಿತ್ರದ ಎರಡನೇ ಹಾಡು ‘ಸಹನಾ ಸಹನಾ’ ಬುಧವಾರ ಹೈದರಾಬಾದ್ನಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಯಿತು. ಹೈದರಾಬಾದ್ನ ಮಾಲ್ನಲ್ಲಿ ನಡೆದ ಈ ಸಮಾರಂಭದಲ್ಲಿ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಈ ಮೆಲೋಡಿ ಹಾಡನ್ನು ಲೋಕಾರ್ಪಣೆ ಮಾಡಲಾಯಿತು. ಹಾರರ್-ಕಾಮಿಡಿ ಜಾನರ್ನಲ್ಲಿ ಮೂಡಿಬರುತ್ತಿರುವ ಈ ಚಿತ್ರವನ್ನು ನಿರ್ಮಾಪಕರಾದ ಟಿ.ಜಿ. ವಿಶ್ವಪ್ರಸಾದ್ ಮತ್ತು ಕೃತಿ ಪ್ರಸಾದ್ ಅವರು ಅದ್ಧೂರಿ…
