ಟ್ರೇಲರ್ ಮೂಲಕ ಗಮನ ಸೆಳೆದ “ಅಣ್ಣಯ್ಯ” ಧಾರಾವಾಹಿ ಖ್ಯಾತಿಯ ವಿಕಾಶ್ ಉತ್ತಯ್ಯ ಅಭಿನಯದ “ಅಪಾಯವಿದೆ ಎಚ್ಚರಿಕೆ” ಚಿತ್ರ “.
ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಅಭಿಮಾನಿಗಳು ಸದಾ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ. ಒಂದೊಳ್ಳೆ ಕಂಟೆಂಟ್ ನೊಂದಿಗೆ ಹಾರಾರ್ ಜಾನರ್ ನ ಕಥಾಹಂದರವನ್ನೂ ಹೊಂದಿರುವ “ಅಪಾಯವಿದೆ ಎಚ್ಚರಿಕೆ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. “ಅಣ್ಣಯ್ಯ” ಧಾರಾವಾಹಿ ಮೂಲಕ ಜನಪ್ರಿಯರಾಗಿರುವ ವಿಕಾಶ್ ಉತ್ತಯ್ಯ ನಾಯಕರಾಗಿ ನಟಿಸಿರುವ ಈ ಚಿತ್ರವನ್ನು ಅಭಿಜಿತ್ ತೀರ್ಥಹಳ್ಳಿ ಬರೆದು ನಿರ್ದೇಶಿಸಿದ್ದಾರೆ. ಹಿರಿಯ ಚಲನಚಿತ್ರ ಪತ್ರಕರ್ತೆ ಸರಸ್ವತಿ ಜಾಗಿರದಾರ್, ಚಲನಚಿತ್ರ ಸ್ಥಿರ ಛಾಯಾಗ್ರಾಹಕರಾದ ಮನು, ಮೋಕ್ಷೇಂದ್ರ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಕನ್ನಡ ಚಲನಚಿತ್ರಗಳನ್ನು ಸದಾ ಪ್ರೋತ್ಸಾಹಿಸುತ್ತಾ…