ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣದ, ಸೃಜನ್ ಲೋಕೇಶ್ ಪ್ರಥಮ ನಿರ್ದೇಶನದ ಬಹು ನಿರೀಕ್ಷಿತ “GST” ಚಿತ್ರ ಸದ್ಯದಲ್ಲೇ ತೆರೆಗೆ
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಸೃಜನ್ ಲೋಕೇಶ್ ನಾಯಕನಾಗಿ ನಟಿಸುವುದಲ್ಲದೆ, ಪ್ರಥಮ ಬಾರಿಗೆ ನಿರ್ದೇಶನವನ್ನು ಮಾಡಿರುವ “GST” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರವನ್ನು ನೀಡಿದೆ. ಬಹು ನಿರೀಕ್ಷಿತ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ “GST” ಚಿತ್ರ ಹಲವು ವಿಶೇಷತೆಗಳನ್ನೊಳಗೊಂಡಿದೆ. ಈ ಚಿತ್ರದಲ್ಲಿ ನಿರ್ಮಾಪಕ ಸಂದೇಶ್ ಅವರು ಪ್ರಮುಖಪಾತ್ರದಲ್ಲಿ ನಟಸಿದ್ದಾರೆ. ಅವರ ಪಾತ್ರ ಏನೆಂಬುದ್ದನ್ನು ನಿರ್ದೇಶಕ…