ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ ಹೊಸಬರ “ವೇಷ” .
ಹಂಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ರಾಘವೇಂದ್ರ ಡಿ.ಜಿ ನಿರ್ಮಿಸಿ ನಾಯಕನಟನಾಗಿ ಅಭಿನಯಿಸಿರುವ, ಕ್ರಷ್ಣ ನಾಡ್ಪಾಲ್ ನಿರ್ದೇಶನದ “ವೇಷ” ಚಿತ್ರದ ಟ್ರೇಲರ್ ಇತ್ತೀಚೆಗೆ A2 ಮ್ಯೂಸಿಕ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ, ಮರಿಟೈಗರ್ ವಿನೋದ್ ಪ್ರಭಾಕರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಹಾಗೂ ಸಂಭಾಷಣೆಕಾರ ಮಾಸ್ತಿ “ವೇಷ” ಚಿತ್ರದ ಟ್ರೇಲರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರತಂಡದ ಸದಸ್ಯರು “ವೇಷ”ದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು. ಜೀವನದಲ್ಲಿ ಎಲ್ಲರೂ ಒಂದಲ್ಲಾ ಒಂದು ರೀತಿ ”…