ಕನ್ನಡದ ಮೊದಲ ಪ್ರಚಾರ ಸಂಸ್ಥೆ ರಾಘವೇಂದ್ರ ಚಿತ್ರವಾಣಿಗೆ 50ರ ಸಡಗರ
ಸುವರ್ಣ ಸಂಭ್ರಮದ ಲೋಗೊ ಅನಾವರಣ ಮಾಡಿ ಹಾರೈಸಿದ ಸಿನಿರಂಗದ ಗಣ್ಯರು ಕನ್ನಡದ ಮೊದಲ ಪ್ರಚಾರ ಸಂಸ್ಥೆ ರಾಘವೇಂದ್ರ ಚಿತ್ರವಾಣಿಗೆ ಈಗ 50ರ ಸಡಗರ. 1976 ರಲ್ಲಿ ದಿ.ಡಿ.ವಿ.ಸುಧೀಂದ್ರ ಅವರು ರಾಘವೇಂದ್ರ ಚಿತ್ರವಾಣಿ ಸಂಸ್ಥೆಯನ್ನು ಪ್ರಾರಂಭಿಸಿದರು. ಈವರೆಗೂ ಸುಮಾರು 3000ಕ್ಕೂ ಅಧಿಕ ಚಿತ್ರಗಳಿಗೆ ಪ್ರಚಾರ ಕಾರ್ಯ ನೀಡಿರುವ ಏಕ ಮಾತ್ರ ಸಂಸ್ಥೆ ಇದಾಗಿದೆ. ಈವರೆಗೂ ಭಾರತ ಚಿತ್ರರಂಗದ ಇತಿಹಾಸದಲ್ಲೇ ಯಾವ ಪ್ರಚಾರ ಸಂಸ್ಥೆ(ಪಿ.ಆರ್.ಓ) ಕೂಡ ಐವತ್ತು ವರ್ಷಗಳ ಕಾಲ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿರುವ ಉದಾಹರಣೆ ಇಲ್ಲ. ಪ್ರಸ್ತುತ ಈ…
