ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು ಹೊಂಬಾಳೆ ಫಿಲಂಸ್ ನಿರ್ಮಾಣದ “ಯುವ” ಚಿತ್ರದ ಪ್ರೀ ರಿಲೀಸ್ ಇವೆಂಟ್ . ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಈ ಚಿತ್ರಕ್ಕೆ ಸಂತೋಷ್ ಆನಂದರಾಮ್ ನಿರ್ದೇಶನ .

ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು ಹೊಂಬಾಳೆ ಫಿಲಂಸ್ ನಿರ್ಮಾಣದ “ಯುವ” ಚಿತ್ರದ ಪ್ರೀ ರಿಲೀಸ್ ಇವೆಂಟ್ . ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಈ ಚಿತ್ರಕ್ಕೆ ಸಂತೋಷ್ ಆನಂದರಾಮ್ ನಿರ್ದೇಶನ .

“ರಾಜಕುಮಾರ”, “ಕೆಜಿಎಫ್”, ” ಕಾಂತಾರ” ದಂತಹ ಜನಪ್ರಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ “ಯುವ” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು. ಯುವ ರಾಜಕುಮಾರ್ ಈ ಚಿತ್ರದ ಮೂಲಕ ನಾಯಕರಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಸಂತೋಷ್ ಆನಂದರಾಮ್ ನಿರ್ದೇಶಿಸಿದ್ದಾರೆ. ಹೊಸಪೇಟೆಯ ಪುನೀತ್ ರಾಜಕುಮಾರ್ ಮೈದಾನದಲ್ಲಿ ಅದ್ದೂರಿಯಾಗಿ ಈ ವರ್ಣರಂಜಿತ ಸಮಾರಂಭ ನಡೆಯಿತು. ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್, ವಿನಯ್ ರಾಜಕುಮಾರ್,…

“ಸ್ಯಾಂಡಲ್ವುಡ್ ನಲ್ಲಿ ಈಗ ರಂಗಸಮುದ್ರದ್ದೆ ಅಲೆ”.

“ಸ್ಯಾಂಡಲ್ವುಡ್ ನಲ್ಲಿ ಈಗ ರಂಗಸಮುದ್ರದ್ದೆ ಅಲೆ”.

ಸಿನಿಪ್ರೇಕ್ಷಕರ ಕುತೂಹಲಕ್ಕೆ ಕಾರಣವಾಗಿದ್ದ ಬಹು ನಿರೀಕ್ಷಿತ ರೆಟ್ರೋ ಮೂವಿ “ರಂಗಸಮುದ್ರ” ಭರ್ಜರಿ ತಯಾರಿಯೊಂದಿಗೆ ಕರ್ನಾಟಕದಾದ್ಯಂತ ಬೆಳ್ಳಿ ತೆರೆಯ ಮೇಲೆ ಸಮುದ್ರದ ಅಲೆಯಂತೆ ಭೋರ್ಗರೆದು ಅಪ್ಪಳಿಸಿ ಜನವರಿ 19 ರಂದು ತೆರೆಕಾಣಲು ಸಿದ್ದವಾಗಿದೆ… “ಒಬ್ಬ ನಿರ್ದೇಶಕ ತಲೆಕೆಡಿಸ್ಕೊಂಡು ನಿಂತ್ರೆ…ಎಂಥಹ ಅದ್ಭುತವನ್ನೇ ಮಾಡಬಹುದು ಅನ್ನೋದಿಕ್ಕೆ ಈ ಚಿತ್ರವೇ ಸಾಕ್ಷಿ” ” ಹೀರೋ ಇಲ್ಲದೆ ಕಥೇಯೆ ಹೀರೋ ಆಗಿರುವ ಈ ಚಿತ್ರದಲ್ಲಿ..ಪ್ರತಿ ಕಲಾವಿದರು ಕೂಡಾ ಈ ಚಿತ್ರಕ್ಕೆ ತುಂಬಾ ನಿಷ್ಠೆಯಿಂದ ತಮ್ಮನ್ನು ತೊಡಗಿಸಿಕೊಂಡಿರುವುದು ಟ್ರೈಲರ್ ನಲ್ಲೆ ಎದ್ದು ಕಾಣುತ್ತೆ” “ಆ ಮೇಕಿಂಗ್…

ರಂಗಾಯಣ ರಘು ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ ಜನಪದ ಸೊಗಡಿನ ಈ ಚಿತ್ರ ಜನವರಿ 12ರಂದು ತೆರೆಗೆ .

ರಂಗಾಯಣ ರಘು ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ ಜನಪದ ಸೊಗಡಿನ ಈ ಚಿತ್ರ ಜನವರಿ 12ರಂದು ತೆರೆಗೆ .

ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ನಟ ರಂಗಾಯಣ ರಘು ಪ್ರಮುಖಪಾತ್ರದಲ್ಲಿ ನಟಿಸಿರುವ ಬಹು ನಿರೀಕ್ಷಿತ “ರಂಗ ಸಮುದ್ರ” ಚಿತ್ರದ ಟ್ರೇಲರ್ ಅನ್ನು ರಾಘವೇಂದ್ರ ರಾಜಕುಮಾರ್ ಅವರು ಬಿಡುಗಡೆ ಮಾಡಿ ಶುಭ ಕೋರಿದರು. ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ರಾಘವೇಂದ್ರ ರಾಜಕುಮಾರ್, ಇಂತಹ ಕಥಾವಸ್ತು ಆಯ್ಕೆ ಮಾಡಿಕೊಂಡಿರುವ ನಿರ್ದೇಶಕರಿಗೆ ಮೊದಲ ಸೆಲ್ಯೂಟ್. ಇನ್ನು ರಂಗಾಯಣ ರಘು ಅವರ ಅಭಿನಯ ನಿಜಕ್ಕೂ ಅದ್ಭುತ. ಇಂತಹ ಚಿತ್ರದಲ್ಲಿ ನಾನು ಅಭಿನಯಿಸಿರುವುದು ನನ್ನ ಭಾಗ್ಯ. ಈ ಚಿತ್ರ ಯಶಸ್ವಿಯಾಗಲಿ….

ಚೇತನ್ ಕುಮಾರ್ ನಿರ್ದೇಶನದಲ್ಲಿ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ ‘ಬರ್ಮ’ ಚಿತ್ರ ಆರಂಭ

ಚೇತನ್ ಕುಮಾರ್ ನಿರ್ದೇಶನದಲ್ಲಿ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ ‘ಬರ್ಮ’ ಚಿತ್ರ ಆರಂಭ

ಬಹದ್ದೂರ್, ಭರ್ಜರಿ, ಭರಾಟೆ, ಜೇಮ್ಸ್ ಚಿತ್ರಗಳ ನಿರ್ದೇಶಕ ಹಾಗೂ ಖ್ಯಾತ ಗೀತರಚನೆಕಾರ ಚೇತನ್ ಕುಮಾರ್ ನಿರ್ದೇಶನದ ಹಾಗೂ “ಗಟ್ಟಿಮೇಳ” ಧಾರಾವಾಹಿ ಖ್ಯಾತಿಯ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ “ಬರ್ಮ” ಚಿತ್ರದ ಮುಹೂರ್ತ ಸಮಾರಂಭ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಆರಂಭ ಫಲಕ ತೋರಿದರು. ರಾಘವೇಂದ್ರ ರಾಜಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು ಹಾಗೂ ನಟ ಧ್ರುವ ಸರ್ಜಾ ಮೊದಲ ದೃಶ್ಯಕ್ಕೆ ಆಕ್ಷನ್ ಕಟ್ ಹೇಳಿದರು. ನಿರ್ಮಾಪಕ ಕೆ.ಪಿ.ಶ್ರೀಕಾಂತ್, ನಿರ್ದೇಶಕ…