ಬಹು ನಿರೀಕ್ಷಿತ “ಬಿಂಗೊ” ಚಿತ್ರಕ್ಕೆ ಮಾತಿನ ಜೋಡಣೆ(ಡಬ್ಬಿಂಗ್) ಮುಕ್ತಾಯ. .ಇದು ಆರ್ ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ ಅಭಿನಯದ ಚಿತ್ರ .
“ಶಂಭೋ ಶಿವ ಶಂಕರ” ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶನದಲ್ಲಿ, ಆರ್ ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ ನಾಯಕ – ನಾಯಕಿಯಾಗಿ ನಟಿಸಿರುವ “ಬಿಂಗೊ” ಚಿತ್ರದ ಡಬ್ಬಿಂಗ್ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ನ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ. ಮೇ 24 ರಂದು ನಟಿ ರಾಗಿಣಿ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ “ಬಿಂಗೊ” ಚಿತ್ರತಂಡ ರಾಗಿಣಿ ಅವರಿಗೆ ಶುಭಾಶಯ ತಿಳಿಸಿದೆ….