ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ “ರಕ್ಕಿ” ಚಿತ್ರದ ಟ್ರೇಲರ್ ಅನಾವರಣ
ಅಶ್ವಿನಿ ಪುನೀತ್ ರಾಜಕುಮಾರ್ ಅವರ ಆಶೀರ್ವಾದದೊಂದಿಗೆ, ಎಸ್ ಎನ್ ಆರ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಾಲಿಗ್ರಾಮ ಸುರೇಶ್ ಅವರು ನಿರ್ಮಿಸಿರುವ, ವೆಂಕಟ್ ಭಾರದ್ವಾಜ್ ನಿರ್ದೇಶನದಲ್ಲಿ ರಕ್ಕಿ ನಾಯಕನಾಗಿ ನಟಿಸಿರುವ “ರಕ್ಕಿ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಈ ಚಿತ್ರದ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಪಿ.ಆರ್.ಕೆ ಆಡಿಯೋದಲ್ಲಿ ಯೂಟ್ಯೂಬ್ ಚಾನಲ್ ನಲ್ಲಿ ಈ ಟ್ರೇಲರ್ ಲಭ್ಯವಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಜರ್ಮನಿಯಲ್ಲಿ ಹಲವು ವರ್ಷಗಳಿಂದ ನೆಲೆಸಿರುವ ಸಾಲಿಗ್ರಾಮ ಮೂಲದ…
