ನಮ್ಮ ಚಿತ್ರಕ್ಕೆ ಯೋಗರಾಜ್ ಭಟ್ ಶೀರ್ಷಿಕೆ ಕೊಟ್ರು.. ಸಿಂಪಲ್ ಸುನಿ ಬ್ಯಾನರ್ ಕೊಟ್ರು ಅದೇ “ಜಂಗಲ್ ಮಂಗಲ್”.. ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಯಶ್ ಶೆಟ್ಟಿ ನಾಯಕನಾಗಿ ನಟಿಸಿರುವ ಈ ಚಿತ್ರ ಜುಲೈ 4 ರಂದು ತೆರೆಗೆ
ನಾನು ಮೊದಲು ಇಬ್ಬರು ಖ್ಯಾತ ನಿರ್ದೇಶಕರಿಗೆ ಧನ್ಯವಾದ ಹೇಳಬೇಕು ಎಂದು ಮಾತನಾಡಿದ “ಜಂಗಲ್ ಮಂಗಲ್” ಚಿತ್ರದ ನಿರ್ದೇಶಕ ರಕ್ಷಿತ್ ಕುಮಾರ್, ನಮ್ಮ ಚಿತ್ರದ ಟ್ರೇಲರ್ ನೋಡಿದ ಯೋಗರಾಜ್ ಭಟ್ ಅವರು ಈ ಚಿತ್ರಕ್ಕೆ “ಜಂಗಲ್ ಮಂಗಲ್” ಎಂದು ಹೆಸರಿಡಿ ಎಂದರು. ಚಿತ್ರ ಮೆಚ್ಚಿಕೊಂಡ ಮತ್ತೊಬ್ಬ ನಿರ್ದೇಶಕ ಸಿಂಪಲ್ ಸುನಿ ತಮ್ಮ ಸುನಿ ಸಿನಿಮಾಸ್ ಬ್ಯಾನರ್ ಮೂಲಕ ಚಿತ್ರವನ್ನು ಅರ್ಪಿಸಲು ಹೇಳಿದರು. ಇದೊಂದು ಅರೆ ಮಲೆನಾಡಿನಲ್ಲಿ ನಡೆಯುವ ಕಥೆ. ನಾವೊಂದಿಷ್ಟು ಜನ ಸ್ನೇಹಿತರೆ ಸೇರಿ ನಿರ್ಮಾಣ ಮಾಡಿರುವ ಚಿತ್ರ….