“ರಾಮರಸ” ಚಿತ್ರದ ಪ್ರಮುಖಪಾತ್ರದಲ್ಲಿ ಅದಾ ಶರ್ಮ
ಚಿತ್ರರಂಗದಲ್ಲಿ ಭಾರಿ ಕುತೂಹಲ ಮೂಡಿಸಿರುವ, ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಚಿತ್ರ ‘ರಾಮರಸ’ ತನ್ನ ಚಿತ್ರೀಕರಣದ ಎಲ್ಲಾ ಹಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಇದೀಗ ಬಿರುಸಿನ ಪೋಸ್ಟ್-ಪ್ರೊಡಕ್ಷನ್ ಹಂತಕ್ಕೆ ಕಾಲಿಟ್ಟಿದೆ. ಪ್ರೇಕ್ಷಕರು ಚಿತ್ರತಂಡದಿಂದ ಏನನ್ನು ನಿರೀಕ್ಷಿಸುತ್ತಿದ್ದಾರೋ ಅದಕ್ಕಿಂತಲೂ ಮಿಗಿಲಾದ ಒಂದು ವಿಶಿಷ್ಟ ಮತ್ತು ಅದ್ಭುತ ಸಿನಿಮಾ ಅನುಭವವನ್ನು ನೀಡಲು ‘ರಾಮರಸ’ ಸಜ್ಜಾಗುತ್ತಿದೆ. ಈಗಾಗಲೇ ದೊಡ್ಡ ತಾರಾಗಣವನ್ನು ಹೊಂದಿರುವ ಈ ಚಿತ್ರಕ್ಕೆ ಈಗ ಮತ್ತೊಂದು ಬಿಗ್ ಸರ್ಪ್ರೈಸ್ ಸಿಕ್ಕಿದೆ. ಬಾಲಿವುಡ್ ಹಾಗೂ ದಕ್ಷಿಣ ಭಾರತದ ಖ್ಯಾತ ನಟಿ ಅದಾ ಶರ್ಮಾ (Adah Sharma)…
