ನಾಯಕ ಧನ್ವೀರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ . ಪೋಸ್ಟರ್ ಬಿಡುಗಡೆ ಮಾಡಿ ಶುಭಕೋರಿದ “ಹಯಗ್ರೀವ” ಚಿತ್ರತಂಡ .

ನಾಯಕ ಧನ್ವೀರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ . ಪೋಸ್ಟರ್ ಬಿಡುಗಡೆ ಮಾಡಿ ಶುಭಕೋರಿದ “ಹಯಗ್ರೀವ” ಚಿತ್ರತಂಡ .

ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ನಾಯಕ ಧನ್ವೀರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂಧರ್ಭದಲ್ಲಿ ಕೆ.ವಿ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ರಘುಕುಮಾರ್ ಓ.ಆರ್ ನಿರ್ದೇಶನದಲ್ಲಿ ಧನ್ವೀರ್ ನಾಯಕರಾಗಿ ನಟಿಸುತ್ತಿರುವ “ಹಯಗ್ರೀವ” ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಈ ಮೂಲಕ ನಾಯಕ ಧನ್ವೀರ್ ಅವರಿಗೆ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಧನ್ವೀರ್ ಅವರ “ಹಯಗ್ರೀವ” ಚಿತ್ರದ ಪಾತ್ರ ಏನಿರಬಹುದೆಂಬ ಕುತೂಹಲ ಅಭಿಮಾನಿಗಳಿಗಿತ್ತು. ಇಂದು ಬಿಡುಗಡೆಯಾಗಿರುವ ಪೋಸ್ಟರ್ ನಲ್ಲಿ ಧನ್ವೀರ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಧನ್ವೀರ್…

ಸೋನಾ ಬೇಬಿ ಜೊತೆ ಹೆಜ್ಜೆ ಹಾಕಿದ ಪ್ರಜ್ವಲ್ ದೇವರಾಜ್ .””ಗಣ” ಚಿತ್ರದಿಂದ ಬಂತು ಮತ್ತೊಂದು ಮನಮೋಹಕ ಗೀತೆ

ಸೋನಾ ಬೇಬಿ ಜೊತೆ ಹೆಜ್ಜೆ ಹಾಕಿದ ಪ್ರಜ್ವಲ್ ದೇವರಾಜ್ .””ಗಣ” ಚಿತ್ರದಿಂದ ಬಂತು ಮತ್ತೊಂದು ಮನಮೋಹಕ ಗೀತೆ

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ “ಗಣ” ಚಿತ್ರ ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನರ ಮೆಚ್ಚುಗೆ ಪಡೆದುಕೊಂಡಿದೆ. “ಗಣ” ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ “ಮೈ ನೇಮ್ ಇಸ್ ಸೋನಾ ಬೇಬಿ ಬೇಬಿ.. ಕಣ್ಣಾಮುಚ್ಚಾಲೆ ನನ್ನ ಹಾಬಿ” ಎಂಬ ಮನಮೋಹಕ ಹಾಡು “ಸರಿಗಮಪ” ಆಡಿಯೋ ಸಂಸ್ಥೆ ಮೂಲಕ ಬಿಡುಗಡೆಯಾಗಿದೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜಿಸಿರುವ ಈ ಮಾಸ್ ಐಟಂ ಹಾಡಿಗೆ ಪ್ರಜ್ವಲ್ ದೇವರಾಜ್ , ನಮೃತಾ ಮಲ್ಲ ಹಾಗೂ ರವಿಕಾಳೆ ಹೆಜ್ಜೆ ಹಾಕಿದ್ದಾರೆ….

ನಾಯಕ ಮಿಲಿಂದ್ ಹುಟ್ಟುಹಬ್ಬಕ್ಕೆ “ಅನ್ ಲಾಕ್ ರಾಘವ” ಚಿತ್ರತಂಡದಿಂದ ಹಾಡಿನ ಉಡುಗೊರೆ .!!

ನಾಯಕ ಮಿಲಿಂದ್ ಹುಟ್ಟುಹಬ್ಬಕ್ಕೆ “ಅನ್ ಲಾಕ್ ರಾಘವ” ಚಿತ್ರತಂಡದಿಂದ ಹಾಡಿನ ಉಡುಗೊರೆ .!!

ಚಿತ್ರ ಆರಂಭವಾದಗಿನಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ “ಅನ್ ಲಾಕ್ ರಾಘವ” ಚಿತ್ರದ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿದೆ. ಹೃದಯಶಿವ ಅವರು ಬರೆದು, ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿ, ಸಾಯಿ ವಿಘ್ನೇಶ್ ಹಾಡಿರುವ “ನನ್ನ ಹುಡುಗಿ” ಎಂಬ ಹಾಡು ನಾಯಕ ಮಿಲಿಂದ್ ಹುಟ್ಟುಹಬ್ಬದಂದು A2 music ಮೂಲಕ ಬಿಡುಗಡೆಯಾಗಿ ಅಪಾರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಹಾಡು ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಹೆಚ್ಚಿನ ಮಾಹಿತಿ ನೀಡಿದರು. ಹಲವು ವಿಶೇಷಗಳನ್ನು ಹೊಂದಿರುವ “ಅನ್ ಲಾಕ್ ರಾಘವ” ಚಿತ್ರದ ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ…

ಮೈಸೂರು ದಸರಾದಲ್ಲಿ ಬಿಡುಗಡೆಯಾಯಿತು “F0R REGN” ಚಿತ್ರದ ಪೋಸ್ಟರ್ ಹಾಗೂ ಹಾಡು…

ಮೈಸೂರು ದಸರಾದಲ್ಲಿ ಬಿಡುಗಡೆಯಾಯಿತು “F0R REGN” ಚಿತ್ರದ ಪೋಸ್ಟರ್ ಹಾಗೂ ಹಾಡು…

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈಗ ದಸರಾ ಸಡಗರ. ಇದೇ ಸಂದರ್ಭದಲ್ಲಿ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿಯಾಗಿ ನಟಿಸಿರುವ “F0R REGN”. (ಫಾರ್ ರಿಜಿಸ್ಟರೇಷನ್) ಚಿತ್ರದ ” ಲವ್ ಗಳ್ ಸುಮಧುರ ಹಾರ್ಟ್ ಗಳ್ ಗಿರಗಿರ” ಎಂಬ ಟ್ರಾವೆಲ್ ವಿಡಿಯೋ ಸಂಗ್ ಹಾಗೂ ನೂತನ ಪೋಸ್ಟರ್ ಬಿಡುಗಡೆಯಾಯಿತು. “ಮಾಲ್ ಆಫ್ ಮೈಸೂರು” ಮಲ್ಟಿಪ್ಲೆಕ್ಸ್ ನಲ್ಲಿ ಪ್ರವಾಸೋದ್ಯಮ ಇಲಾಖೆಯ ಜಾಯಿಂಟ್ ಕಮೀಷನರ್ ಕೆ.ಎಂ.ಸವಿತಾ ಅವರು ಹಾಡು ಹಾಗು ಪೋಸ್ಟರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ…