ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿದೆ “ರಾ.. ರಾ.. RX”
ಅದ್ದೂರಿಯಾಗಿ ಆರಂಭವಾಯಿತು ಯತಿರಾಜ್ ನಿರ್ದೇಶನದ ಹಾಗೂ ಕಾರ್ತೀಕೇಯ ಎಂಟರ್ ಪ್ರೈಸಸ್ ನಿರ್ಮಾಣದ ಈ ಚಿತ್ರ . ಪತ್ರಕರ್ತ, ಕಲಾವಿದ ಹಾಗೂ ನಿರ್ದೇಶಕ ಯತಿರಾಜ್ ನಿರ್ದೇಶನದ ಮತ್ತು ಕಾರ್ತಿಕೇಯ ಎಂಟರ್ ಪ್ರೈಸಸ್ ಲಾಂಛನದಲ್ಲಿ ವೃದ್ಧಿ ಸುನೀಲ್, ಚೇತನ್ ಟಿ.ಆರ್ ಹಾಗೂ ಚಂದ್ರಶೇಖರ್ ಎಸ್ ಎಂ ನಿರ್ಮಿಸುತ್ತಿರುವ “ರಾ.. ರಾ..RX” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಹಿರಿಯ ಛಾಯಾಗ್ರಾಹಕ ಕೆ.ಎನ್ ನಾಗೇಶ್ ಕುಮಾರ್, ಪತ್ರಕರ್ತ ವಿ.ಸಿ.ಎನ್ ಮಂಜು ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ನಿರ್ಮಾಪಕ…
