“ಎಲೆಕ್ಟ್ರಾನಿಕ್ ಸಿಟಿ”ಯಲ್ಲಿದೆ ಐಟಿ ಉದ್ಯೋಗಿಯ ವರ್ಕ್ ಲೈಫ್ . ಬೆಂಗಳೂರಿನ ಪ್ರಸಿದ್ದ ಬಡಾವಣೆಯ ಹೆಸರೆ ಈಗ ಚಿತ್ರದ ಶೀರ್ಷಿಕೆ .
ಬಹುಶಃ “ಎಲೆಕ್ಟ್ರಾನಿಕ್ ಸಿಟಿ” ಎಂಬ ಹೆಸರನ್ನು ಕೇಳದವರು ಯಾರು ಇಲ್ಲ ಎನ್ನಬಹುದು. ಅದರಲ್ಲೂ ಐಟಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸುವರಿಗಂತೂ ಈ ಹೆಸರು ಚಿರಪರಿಚಿತ. ಬೆಂಗಳೂರಿನ ಈ ಸುಪ್ರಸಿದ್ಧ ಬಡಾವಣೆಯಲ್ಲಿ ಸಾಕಷ್ಟು ಐಟಿ ಕಂಪನಿಗಳಿದೆ. ಈಗ ಇದೇ ಹೆಸರಿನಲ್ಲಿ ಚಿತ್ರವೊಂದು ನಿರ್ಮಾಣವಾಗಿದ್ದು, ನವೆಂಬರ್ 24 ರಂದು ತೆರೆಗೆ ಬರುತ್ತಿದೆ. ಮೂಲತಃ ಐಟಿ ಉದ್ಯೋಗಿಯಾಗಿರುವ ಆರ್ ಚಿಕ್ಕಣ್ಣ ಈ ಚಿತ್ರವನ್ನು ನಿರ್ಮಾಣ ಮಾಡಿ ನಿರ್ದೇಶಿಸಿದ್ದಾರೆ. ಈವರೆಗೂ ಕೆಲವು ಕಿರುಚಿತ್ರಗಳನ್ನು ಚಿಕ್ಕಣ್ಣ ನಿರ್ದೇಶಿಸಿದ್ದಾರೆ. ಈಗಿನ ಬಹುಪಾಲು ಯುವಕರು ಐಟಿ ಉದ್ಯೋಗಿಗಳಾಗಿದ್ದು, ಸದಾ…