‘ಭೈರಾದೇವಿ’ ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ . ರಾಧಿಕಾ ಕುಮಾರಸ್ವಾಮಿ ನಿರ್ಮಾಣ ಹಾಗೂ ನಟನೆಯ ಈ ಚಿತ್ರ ಅಕ್ಟೋಬರ್ 3 ರಂದು ತೆರೆಗೆ .
ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿ, ನಾಯಕಿಯಾಗೂ ನಟಿಸಿರುವ ಬಹು ನಿರೀಕ್ಷಿತ “ಭೈರಾದೇವಿ” ಸಿನಿಮಾ ಅಕ್ಟೋಬರ್ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದರ ಪೂರ್ವಭಾವಿಯಾಗಿ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ರಮೇಶ್ ಅರವಿಂದ್, ರಾಧಿಕಾ ಕುಮಾರಸ್ವಾಮಿ, ಅನು ಪ್ರಭಾಕರ್, ನಿರ್ದೇಶಕ ಶ್ರೀಜೈ, ನೃತ್ಯ ನಿರ್ದೇಶಕ ಮೋಹನ್, ಸಹ ನಿರ್ಮಾಪಕರಾದ ರವಿರಾಜ್, ಯಾದವ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಟ್ರೇಲರ್ ಬಿಡುಗಡೆ ನಂತರ ಮಾತನಾಡಿದ ರಾಧಿಕಾ ಕುಮಾರಸ್ವಾಮಿ, ನಿರ್ದೇಶಕ ಶ್ರೀಜೈ ನಮ್ಮ…