“ಕಬ್ಜ” ಚಿತ್ರದ ನಂತರ ಆರ್ ಚಂದ್ರು ನಿರ್ದೇಶಿಸುತ್ತಿರುವ, ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ “ಒರಿಜಿನಲ್ ಮಾನ್ ಸ್ಟರ್”(OM) ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯ .
ಭರ್ಜರಿ ಯಶಸ್ಸು ಕಂಡ ಪ್ಯಾನ್ ಇಂಡಿಯಾ “ಕಬ್ಜ” ಸೇರಿದಂತೆ ಅನೇಕ ಯಶಸ್ವಿ ಚಿತ್ರಗಳ ನಿರ್ದೇಶಕ ಆರ್ ಚಂದ್ರು, ಎರಡೂವರೆ ವರ್ಷಗಳ ನಂತರ “ಒರಿಜಿನಲ್ ಮಾನ್ ಸ್ಟರ್” ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಆನಂದ್ ಪಂಡಿತ್ ಅರ್ಪಿಸುವ, ಆರ್ ಸಿ ಸ್ಟುಡಿಯೋಸ್ ಲಾಂಛನದಲ್ಲಿ ಯಮುನ ಚಂದ್ರು ಅವರು ನಿರ್ಮಿಸುತ್ತಿರುವ ಹಿಂದಿ ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ “ಒರಿಜಿನಲ್ ಮಾನ್ ಸ್ಟರ್” ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಮುಂಬೈನಲ್ಲಿ ಹಾಗೂ…
