ಪ್ರಣಂ ದೇವರಾಜ್ ಅಭಿನಯದ “S\O ಮುತ್ತಣ್ಣ” ಚಿತ್ರದ ಹಾಡನ್ನು ಹಾಡುವುದರ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ ಖ್ಯಾತ ಗಾಯಕಿ ದೀಪ್ತಿ ಸುರೇಶ್
ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ “S\O ಮುತ್ತಣ್ಣ” ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ “ಕರೆದರೆ ಹಾಗೆಲಾ ಬರಲಾರೆ ನಾನು” ಎಂಬ ಹಾಡನ್ನು ತಮಿಳು ಹಾಗೂ ಹಿಂದಿ ಚಿತ್ರಗಳ ಪ್ರಸಿದ್ದ ಗೀತೆಗಳನ್ನು ಹಾಡಿ ಜನಪ್ರಿಯರಾಗಿರುವ ಗಾಯಕಿ ದೀಪ್ತಿ ಸುರೇಶ್ ಹಾಡಿದ್ದಾರೆ. ಈ ಹಾಡನ್ನು ಹಾಡುವ ಮೂಲಕ ದೀಪ್ತಿ ಸುರೇಶ್ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಸಚಿನ್ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. “ಮಾಮನ್ನನ್”, “ಬೇಬಿ…