“ಗನ್ಸ್ ಅಂಡ್ ರೋಸಸ್” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತದಲ್ಲಿ .
ಹೆಚ್ ಆರ್ ನಟರಾಜ್ ನಿರ್ಮಾಣದ, ಹೆಚ್ ಎಸ್ ಶ್ರೀನಿವಾಸಕುಮಾರ್ ನಿರ್ದೇಶನದಲ್ಲಿ ಅರ್ಜುನ್ ನಾಯಕರಾಗಿ ನಟಿಸಿರುವ “ಗನ್ಸ್ ಅಂಡ್” ರೋಸಸ್ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಕೆಲವೇ ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಈವರೆಗೂ ನಲವತ್ತು ದಿನಗಳ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆದಿದೆ. ವಿಜಯ್ ಪ್ರಕಾಶ್ ಅವರು ಹಾಡಿರುವ “108 ಗೇ ಫೋನ್ ಮಾಡೋ ಶಿಷ್ಯ” ಎಂಬ ಹಾಡು ಇತ್ತೀಚೆಗೆ ಬಾರ್ ಸೆಟ್ ನಲ್ಲಿ ಅದ್ದೂರಿಯಾಗಿ ಚಿತ್ರೀಕರಣಗೊಂಡಿದೆ. ಧನಂಜಯ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿಗೆ ನಾಯಕ ಅರ್ಜುನ್,…