ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ “ಗನ್ಸ್ ಅಂಡ್ ರೋಸಸ್” ಹಾಡು . .
ತಮ್ಮ ಅಮೋಘ ಕಂಠಸಿರಿಯಿಂದ ವಿಶ್ವದಾದ್ಯಂತ ಜನಪ್ರಿಯರಾಗಿರುವ ಗಾಯಕ ವಿಜಯ್ ಪ್ರಕಾಶ್, “ಗನ್ಸ್ ಅಂಡ್ ರೋಸಸ್” ಚಿತ್ರದ ಹಾಡೊಂದನ್ನು ಹಾಡಿದ್ದಾರೆ. ಶರಣ್ ಕುಮಾರ್ ಅವರು ಬರೆದಿರುವ “108 ಗೆ ಫೋನ್ ಮಾಡೊ ಶಿಷ್ಯ. ಸಾವು ಬದುಕಿನ ಮಧ್ಯೆ ಹೋರಾಡೊ ವಿಷ್ಯ” ಎಂಬ ಹಾಡನ್ನು ವಿಜಯ್ ಪ್ರಕಾಶ್ ಅವರು ಹಾಡಿದ್ದು, ಇತ್ತೀಚೆಗೆ ಹೊಸಕೆರೆಹಳ್ಳಿಯ ದ್ವಾರ ಸ್ಟುಡಿಯೋದಲ್ಲಿ ಧ್ವನಿಮುದ್ರವಾಯಿತು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ರಾಜಕೀಯದಲ್ಲಿ ಸಕ್ರಿಯರಾಗಿರುವ ಉದ್ಯಮಿ ಹೆಚ್ ಆರ್ ನಟರಾಜ್ ನಿರ್ಮಾಣ…