-
-
ಪ್ರಜ್ವಲ್ ದೇವರಾಜ್ – ಅದಿತಿ ಪ್ರಭುದೇವ ಅಭಿನಯದ “ಮಾಫಿಯಾ” ಚಿತ್ರಕ್ಕೆ ಡಬ್ಬಿಂಗ್ ಮುಕ್ತಾಯ. .
ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ “ಮಾಫಿಯಾ” ಚಿತ್ರಕ್ಕೆ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ ಡಬ್ಬಿಂಗ್ ಮುಕ್ತಾಯವಾಗಿದೆ. ಅಕ್ಟೋಬರ್ ನಲ್ಲಿ ಟೀಸರ್ ಬರಲಿದ್ದು, ನವೆಂಬರ್ ಅಂತ್ಯದ ವೇಳೆಗೆ ಸಿನಿಮಾ ತೆರೆಗೆ ಬರಲಿದೆ. ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ…
-
ಡಿಸೆಂಬರ್ 22ಕ್ಕೆ ಬಿಡುಗಡೆಯಾಗಲಿದೆ ಬಹು ನಿರೀಕ್ಷಿತ ಹೊಂಬಾಳೆ ಫಿಲಂಸ್ನ ‘ಸಲಾರ್’
ಪ್ರಭಾಸ್ ಅಭಿನಯದ ‘ಸಲಾರ್’ ಚಿತ್ರದ ಬಿಡುಗಡೆ ಯಾವಾಗ ಎಂಬ ಅಭಿಮಾನಿಗಳ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ, ಪ್ರಶಾಂತ್ ನೀಲ್ ನಿರ್ದೇಶನದ ಅತ್ಯಂತ ಮಹಾತ್ವಾಕಾಂಕ್ಷೆಯ ಚಿತ್ರವಾದ ‘ಸಲಾರ್ ಪಾರ್ಟ್ 1 – ಸೀಸ್ಫೈರ್’, ಡಿ. 22 ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.‘ಸಲಾರ್ ಪಾರ್ಟ್ 1 – ಸೀಸ್ಫೈರ್’ ಚಿತ್ರದ ಮೊದಲ ಟೀಸರ್ ಯಾವಾಗ ಬಿಡುಗಡೆಯಾಯಿತೋ, ಆಗಿನಿಂದಲೇ ಜಗತ್ತಿನಾದ್ಯಂತ ಇರುವ ಪ್ರಭಾಸ್ ಅಭಿಮಾನಿಗಳಲ್ಲಿ ಈ ಚಿತ್ರದ ಬಗ್ಗೆ ಕುತೂಹಲ ಮತ್ತು ನಿರೀಕ್ಷೆಗಳು ಗರಿಗೆದರಿವೆ. ‘ಸಲಾರ್’ ಪ್ರಪಂಚವನ್ನು ಪರಿಯಿಸುವ…
-
ಡಾರ್ಲಿಂಗ್ ಕೃಷ್ಣ ಅಭಿನಯದ “ಶುಗರ್ ಫ್ಯಾಕ್ಟರಿ” ಟ್ರೇಲರ್ ಗೆ ಸಿನಿರಸಿಕರು ಫಿದಾ
ದೀಪಕ್ ಅರಸ್ ನಿರ್ದೇಶನದ ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 24 ರಂದು ತೆರೆಗೆ . ಬಿಡುಗಡೆಗೂ ಮುನ್ನವೇ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ “ಶುಗರ್ ಫ್ಯಾಕ್ಟರಿ” ಚಿತ್ರ ಭಾರಿ ಸುದ್ದಿಯಲ್ಲಿದೆ. ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡೆಗಡೆಯಾಗಿರುವ ಈ ಚಿತ್ರದ ಟ್ರೇಲರ್ ಕುತೂಹಲ ಮೂಡಿಸಿದೆ. ಚಿತ್ರ ನೋಡುವ ಕಾತುರವನ್ನು ಮತ್ತಷ್ಟು ಹೆಚ್ಚಿಸಿದೆ. ಟ್ರೇಲರ್ ನಲ್ಲಿ ಮನೋರಂಜನೆಯ ಮಹಾಪೂರವೇ ಹರಿದು ಬಂದಿದೆ. ಎರಡು ನಿಮಿಷಗಳ ಟ್ರೇಲರ್ ನಲ್ಲೇ ಇಷ್ಟು ಮನರಂಜನೆ ಹಾಗೂ ಹಾಸ್ಯಭರಿತ ಸಂಭಾಷಣೆಗಳಿದೆ. ಇನ್ನು ಇಡೀ…
-
ಕಿರುತೆರೆಯಿಂದ ಹಿರಿತೆರೆಯತ್ತ ಜನಪ್ರಿಯ ಧಾರಾವಾಹಿಗಳ ನಟಿ ಗಗನ ಕುಂಚಿ
ಸುಗಮ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಎರಡು ಹೊಸ ಚಿತ್ರಗಳಲ್ಲಿ ನಟನೆ ಕನ್ನಡ ಕಿರುತೆರೆಯಲ್ಲಿ ತನ್ನದೇ ಛಾಪು ಮೂಡಿಸಿರುವ ‘ದೊಡ್ಮನೆ ಸೊಸೆ’, ‘ಗಟ್ಟಿಮೇಳ’ ಮುಂತಾದ ಧಾರಾವಾಹಿಗಳ ಖ್ಯಾತಿಯ ನಟಿ ಗಗನ ಕುಂಚಿ, ಈಗ ಹಿರಿತೆರೆಗೆ ಕಾಲಿಡುವುದಕ್ಕೆ ಸಜ್ಜಾಗಿದ್ದಾರೆ. ಎರಡು ಚಿತ್ರಗಳಲ್ಲಿ ಗಗನ ಕುಂಚಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಆ ಎರಡೂ ಚಿತ್ರಗಳು ಸದ್ಯದಲ್ಲೇ ಆರಂಭವಾಗಲಿದೆ. ಗಗನ ಕುಂಚಿ ನಾಯಕಿಯಾಗಿ ನಟಿಸುತ್ತಿರುವ ಎರಡು ಚಿತ್ರಗಳು ಸುಗಮ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತದೆ. ಪ್ರೊಡಕ್ಷನ್ ನಂ ೧ ಚಿತ್ರವನ್ನು ಗುರುಕುಮಾರ್ ಪಿ ನಿರ್ದೇಶಿಸುತ್ತಿದ್ದಾರೆ. ತೆಲುಗಿನ…
-
ರಾಷ್ಟ್ರ ಪ್ರಶಸ್ತಿ ವಿಜೇತ ಅನಿರುದ್ಧ್ ಜತಕರ್ ಅವರಿಗೆ ಅಭಿಮಾನಿಗಳಿಂದ ಆತ್ಮೀಯ ಸನ್ಮಾನ .
ಹಿರಿತೆರೆ ಹಾಗೂ ಕಿರುತೆರೆತಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ನಟ ಅನಿರುದ್ಧ್ ಜತಕರ್. “ಬಾಳೇ ಬಂಗಾರ” ಸಾಕ್ಷ್ಯ ಚಿತ್ರದ ನಿರ್ದೇಶನಕ್ಕಾಗಿ ಅನಿರುದ್ಧ್ ಅವರಿಗೆ ರಾಷ್ಟಪ್ರಶಸ್ತಿ ಮನ್ನಣೆ ದೊರೆತಿದೆ. ಈ ಸಂಭ್ರಮವನ್ನು ಅನಿರುದ್ಧ್ ಅವರ ಅಭಿಮಾನಿಗಳು ಸಂತೋಷದಿಂದ ಸಂಭ್ರಮಿಸಿದ್ದಾರೆ. ಇತ್ತೀಚೆಗೆ ನಗರದ ಖಾಸಗಿ ಹೋಟೆಲ್ ನಲ್ಲಿ ಅನಿರುದ್ಧ್ ಜತಕರ ಅಭಿಮಾನಿ ಬಳಗದ ನಿಶಾದ್ (ಹೈದರಾಬಾದ್ ), ಗಾಯತ್ರಿ( ತಮಿಳುನಾಡು), ಸೋನಿ(ಸಿಂಗಾಪುರ), ಪುಷ್ಪ(ಬೆಂಗಳೂರು) ಸೇರಿದಂತೆ ಅನೇಕ ಅಭಿಮಾನಿಗಳು ಅನಿರುದ್ದ್ ಅವರಿಗೆ ಆತ್ಮೀಯ ಅಭಿನಂದನಾ ಸಮಾರಂಭವನ್ನು ಆಯೋಜಿಸಿ, ನ್ಯಾಚುರಲ್ ಸ್ಟಾರ್ ಎಂಬ…
-
ತೆಲುಗಿನಲ್ಲಿ ಕನ್ನಡದ ಪ್ರತಿಭೆ ಡ್ಯಾನಿ ಕುಟ್ಟಪ್ಪ ಅಬ್ಬರ
ಬೋಯಾಪಾಟಿ ಶ್ರೀನಿ, ರಾಮ್ ಪೋತಿನೇನಿ ಜೋಡಿಯ ‘ಸ್ಕಂದ’ ಚಿತ್ರದಲ್ಲಿ ‘ಬೆಂಕಿ ಕಂಗಳ ನಟ ’ ಕನ್ನಡ ಚಿತ್ರರಂಗದಲ್ಲಿ ‘ಬೆಂಕಿ ಕಂಗಳ ನಟ’ ಎಂದೇ ಜನಪ್ರಿಯರಾಗಿರುವ ಡ್ಯಾನಿ ಕುಟ್ಟಪ್ಪ ಈಗ ತೆಲುಗಿನಲ್ಲಿ ಅಬ್ಬರಿಸುವುದಕ್ಕೆ ಸಜ್ಜಾಗಿದ್ದಾರೆ. ಸದ್ಯದಲ್ಲೇ ಬಿಡುಗಡೆಯಾಗಲಿರುವ ತೆಲುಗಿನ ಮಾಸ್ ನಿರ್ದೇಶಕ ಬೋಯಾಪಾಟಿ ಶ್ರೀನು ನಿರ್ದೇಶನದ, ರಾಮ್ ಪೋತಿನೇನಿ ಅಭಿನಯದ ‘ಸ್ಕಂದ’ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಡ್ಯಾನಿಗೆ ಟಾಲಿವುಡ್ ಹೊಸದೇನಲ್ಲ. ‘ಬಾಹುಬಲಿ’ ಚಿತ್ರದ ಮೂಲಕ ತೆಲುಗಿಗೆ ಹೊರಟ ಅವರು, ನಂತರ ‘ಗದ್ದಲಕೊಂಡ ಗಣೇಶ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದರು. ಈಗ…
-
ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಬಿಡುಗಡೆಯಾಯಿತು “ಗರುಡ ಪುರಾಣ” ಚಿತ್ರದ ಟೀಸರ್
27 ಫ್ರೇಮ್ ಕ್ರಿಯೇಷನ್ಸ್ ಲಾಂಛನದಲ್ಲಿ ಸಿಂಧು ಕೆ.ಎಂ ಮತ್ತು ಬಿ.ಎಲ್ ಯೋಗೇಶ್ ಕುಮಾರ್ ನಿರ್ಮಿಸುತ್ತಿರುವ, ಮಂಜುನಾಥ್ ಬಿ ನಾಗಬಾ ಕಥೆ, ಚಿತ್ರಕಥೆ ಬರೆದು ಸಂಕಲನ ಮಾಡಿ ನಿರ್ದೇಶಿಸಿರುವ ” ಗರುಡ ಪುರಾಣ” ಚಿತ್ರದ ಟೀಸರ್ ಅನ್ನು ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ಮಾಜಿ ಶಾಸಕರಾದ ರಾಜು ಗೌಡ, ತಿಪ್ಪರಾಜು, ಡಿ.ಎಸ್.ಮ್ಯಾಕ್ಸ್ ನ ದಯಾನಂದ್, ನಿವೃತ್ತ ಪೊಲೀಸ್ ಅಧಿಕಾರಿ ಶ್ರೀನಿವಾಸ್ ಕೂಚ್ಚಣ್ಣ, ನಟ ಮಣಿಕಂಠ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಾನು “ಕಾಂತಾರ”…
-
ಚೇತನ್ ಕುಮಾರ್ ನಿರ್ದೇಶನದಲ್ಲಿ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ ‘ಬರ್ಮ’ ಚಿತ್ರ ಆರಂಭ
ಬಹದ್ದೂರ್, ಭರ್ಜರಿ, ಭರಾಟೆ, ಜೇಮ್ಸ್ ಚಿತ್ರಗಳ ನಿರ್ದೇಶಕ ಹಾಗೂ ಖ್ಯಾತ ಗೀತರಚನೆಕಾರ ಚೇತನ್ ಕುಮಾರ್ ನಿರ್ದೇಶನದ ಹಾಗೂ “ಗಟ್ಟಿಮೇಳ” ಧಾರಾವಾಹಿ ಖ್ಯಾತಿಯ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ “ಬರ್ಮ” ಚಿತ್ರದ ಮುಹೂರ್ತ ಸಮಾರಂಭ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಆರಂಭ ಫಲಕ ತೋರಿದರು. ರಾಘವೇಂದ್ರ ರಾಜಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು ಹಾಗೂ ನಟ ಧ್ರುವ ಸರ್ಜಾ ಮೊದಲ ದೃಶ್ಯಕ್ಕೆ ಆಕ್ಷನ್ ಕಟ್ ಹೇಳಿದರು. ನಿರ್ಮಾಪಕ ಕೆ.ಪಿ.ಶ್ರೀಕಾಂತ್, ನಿರ್ದೇಶಕ…
-
ಉದ್ಯಾನನಗರಿಯಲ್ಲಿ “ಗನ್ಸ್ ಅಂಡ್ ರೋಸಸ್”
ಭೂಗತ ಜಗತ್ತಿನ ಕಥೆಯ ಜೊತೆಗೆ ಪ್ರೇಮ ಕಥಾನಕವನ್ನು ಹೊಂದಿರುವ “ಗನ್ಸ್ ಅಂಡ್ ರೋಸಸ್” ಚಿತ್ರಕ್ಕೆ ಉದ್ಯಾನನಗರಿ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಬೆಂಗಳೂರಿನ ಕೆಂಗೇರಿ ಸುತ್ತಮುತ್ತ, ಕಂಠೀರವ ಸ್ಟುಡಿಯೋ, ಉಲ್ಲಾಳದ ವಿಶ್ವೇಶ್ವರಯ್ಯ ಲೇಔಟ್ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಬೆಂಗಳೂರು ನಗರದಲ್ಲೇ ನಡೆಯುವ ಕಥೆಯಾಗಿರುವುದರಿಂದ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆಯುತ್ತಿದೆ. ಈವರೆಗೂ ಮಾತಿನ ಭಾಗದ ಚಿತ್ರೀಕರಣ, ಸಾಹಸ ಸನ್ನಿವೇಶದ ಚಿತ್ರೀಕರಣ ನಡೆದಿದೆ. ಥ್ರಿಲ್ಲರ್ ಮಂಜು ಈ ಚಿತ್ರದ ಸಾಹಸ ನಿರ್ದೇಶಕರು. ರಾಜಕೀಯದಲ್ಲಿ ಸಕ್ರಿಯರಾಗಿರುವ ಉದ್ಯಮಿ ಹೆಚ್ ಆರ್ ನಟರಾಜ್…
