ವಿಭಿನ್ನ ಕಥಾಹಂದರ ಹೊಂದಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರಕ್ಕೆ ಮನು ಮಡೆನೂರ್ ನಾಯಕ . ಸಂಕ್ರಾಂತಿ ಹಬ್ಬದಂದು ಆರಂಭವಾದ ಈ ಚಿತ್ರಕ್ಕೆ ಯೋಗರಾಜ್ ಭಟ್ಟರ ಶಿಷ್ಯ ಶ್ರೇಯಸ್ ರಾಜ್ ಶೆಟ್ಟಿ ನಿರ್ದೇಶನ .ವಿಭಿನ್ನ ಕಥಾಹಂದರ ಹೊಂದಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರಕ್ಕೆ ಮನು ಮಡೆನೂರ್ ನಾಯಕ .
ಮಕರ ಸಂಕ್ರಾಂತಿ ಪರ್ವದಿನದಂದು ಯೋಗರಾಜ್ ಸಿನಿಮಾಸ್ ಹಾಗೂ ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಯೋಗರಾಜ್ ಭಟ್, ವಿದ್ಯಾ ಹಾಗೂ ಸಂತೋಷ್ ಕುಮಾರ ಅವರು ನಿರ್ಮಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಮುಹೂರ್ತ ಸಮಾರಂಭ ಜೆ.ಪಿ.ನಗರದ ಶ್ರೀ ವಿನಾಯಕ ಸತ್ಯ ಗಣಪತಿ ಶಿರಡಿ ಸಾಯಿಬಾಬ ದೇವಸ್ಥಾನದಲ್ಲಿ ನೆರವೇರಿತು. ಯೋಗರಾಜ್ ಭಟ್ ಅವರ ಜೊತೆ ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೇಯಸ್ ರಾಜ್ ಶೆಟ್ಟಿ ನಿರ್ದೇಶಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದಲ್ಲಿ “ಕಾಮಿಡಿ ಕಿಲಾಡಿಗಳು” ಸೀಸನ್ ೨ ವಿಜೇತ ಮನು ಮಡೆನೂರ್ ನಾಯಕನಾಗಿ…