ವಿದ್ಯಾ ವಿಜಯ್ ಅಭಿನಯದ ‘ಬೇಬೋ’ ಚಿತ್ರಕ್ಕೆ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಚಾಲನೆ. ಪ್ರಯತ್ನ ಮಾಡಿದರೆ ಯಾವುದೂ ಅಸಾಧ್ಯವಲ್ಲ ಎಂದು ಸಾರುವ ಚಿತ್ರ.
ಈ ಹಿಂದೆ ‘ಯುದ್ಧ ಮತ್ತು ಸ್ವಾತಂತ್ರ್ಯ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದ ವಿದ್ಯಾ, ಈಗ ಒಂದು ಸಣ್ಣ ಗ್ಯಾಪ್‍ನ ನಂತರ ನಾಯಕಿಯಾಗಿ ನಟಿಸುತ್ತಿದ್ದಾರೆ. ವಿದ್ಯಾ ಸದ್ಯ ‘ಬೇಬೋ’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಮುಹೂರ್ತ ಇತ್ತೀಚಿಗೆ ಶ್ರೀ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿದೆ. ಉಪೇಂದ್ರ ಅವರ ಅಣ್ಣನ ಮಗ ನಿರಂಜನ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಭಾ.ಮ. ಹರೀಶ್, ನಟ ಕೌಶಿಕ್, ಅನಂತು ಮುಂತಾದ ಗಣ್ಯರು ಈ ಚಿತ್ರದ ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು….