ಹೊಂಬಾಳೆ ಫಿಲಂಸ್ ನಿರ್ಮಾಣದ ಹಾಗೂ ರಿಷಭ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ “ಕಾಂತಾರ” ಚಿತ್ರಕ್ಕೆ ಎರಡು ರಾಷ್ಟ್ರ ಪ್ರಶಸ್ತಿಗಳು . ದೆಹಲಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕಾರ .

ಹೊಂಬಾಳೆ ಫಿಲಂಸ್ ನಿರ್ಮಾಣದ ಹಾಗೂ ರಿಷಭ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ “ಕಾಂತಾರ” ಚಿತ್ರಕ್ಕೆ ಎರಡು ರಾಷ್ಟ್ರ ಪ್ರಶಸ್ತಿಗಳು . ದೆಹಲಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕಾರ .

ಇಡೀ ವಿಶ್ವವೇ ಕನ್ನಡ ಚಿತ್ರರಂಗದ ಕಡೆ ತಿರುಗಿ ನೋಡುವಂತೆ ಮಾಡಿದ ಚಿತ್ರ ಹೊಂಬಾಳೆ ಫಿಲಂಸ್ ನಿರ್ಮಾಣದ “ಕಾಂತಾರ”. ರಿಷಭ್ ಶೆಟ್ಟಿ ಈ ಚಿತ್ರದ ನಾಯಕನಾಗಿ ನಟಿಸುವುದಷ್ಟೇ ಅಲ್ಲದೆ, ನಿರ್ದೇಶನವನ್ನು ಮಾಡಿದ್ದರು. 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ “ಕಾಂತಾರ” ಚಿತ್ರಕ್ಕೆ ಎರಡು ರಾಷ್ಟ್ರೀಯ ಪ್ರಶಸ್ತಿಗಳು ಬಂದಿದೆ. “ಕಾಂತಾರ” ಚಿತ್ರಕ್ಕೆ ಅತ್ಯುತ್ತಮ ಮನೋರಂಜನಾ ಚಿತ್ರ ಹಾಗೂ ಈ ಚಿತ್ರದ ನಟನೆಗಾಗಿ ರಿಷಭ್ ಶೆಟ್ಟಿ ಅವರು ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ 70ನೇ ರಾಷ್ಟ್ರೀಯ ಚಲನಚಿತ್ರ…

ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಿಷಭ್ ಶೆಟ್ಟಿ ಮತದಾನ.

ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಿಷಭ್ ಶೆಟ್ಟಿ ಮತದಾನ.

ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಿಷಭ್ ಶೆಟ್ಟಿ ಕುಂದಾಪುರ ಜಿಲ್ಲೆಯ ಕೆರಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು .

ಟ್ರೇಲರ್ ನಲ್ಲೇ ಮೋಡಿ ಮಾಡಿದ “ಬ್ಯಾಚುಲರ್ ಪಾರ್ಟಿ” . ರಕ್ಷಿತ್ ಶೆಟ್ಟಿ ನಿರ್ಮಾಣದ ಈ ಚಿತ್ರ ಜನವರಿ 26 ರಂದು ತೆರೆಗೆ .

ಟ್ರೇಲರ್ ನಲ್ಲೇ ಮೋಡಿ ಮಾಡಿದ “ಬ್ಯಾಚುಲರ್ ಪಾರ್ಟಿ” . ರಕ್ಷಿತ್ ಶೆಟ್ಟಿ ನಿರ್ಮಾಣದ ಈ ಚಿತ್ರ ಜನವರಿ 26 ರಂದು ತೆರೆಗೆ .

ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ ಎಸ್ ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಾಣದ, ಅಭಿಜಿತ್ ಮಹೇಶ್ ನಿರ್ದೇಶನದ, ದಿಗಂತ್, ಲೂಸ್ ಮಾದ ಯೋಗಿ, ಅಚ್ಯುತಕುಮಾರ್ ಪ್ರಮುಖಪಾತ್ರದಲ್ಲಿ ನಟಿಸಿರುವ “ಬ್ಯಾಚುಲರ್ ಪಾರ್ಟಿ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಪಂಚಿಂಗ್ ಡೈಲಾಗ್ ಗಳ ಮೂಲಕ ಟ್ರೇಲರ್ ಎಲ್ಲರನ್ನೂ ಮೋಡಿ ಮಾಡುತ್ತಿದೆ‌ . ಟ್ರೇಲರ್ ಬಿಡುಗಡೆಯ ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು. ನಾನು ಕಿರುಚಿತ್ರ ಮಾಡುತ್ತಿದ್ದ ಸಮಯದಲ್ಲಿ ನನಗೆ ಅಭಿಜಿತ್ ಮಹೇಶ್ ಪರಿಚಯವಾದರು. “ಕಿರಿಕ ಪಾರ್ಟಿ”, ” ಅವನೇ ಶ್ರೀಮನ್ನಾರಾಯಣ”…

“ಕಾಂತಾರ”ಕ್ಕೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ. ಭಾರತದ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ. ತೀರ್ಪುಗಾರರ ವಿಶೇಷ ಪ್ರಶಸ್ತಿ.

“ಕಾಂತಾರ”ಕ್ಕೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ. ಭಾರತದ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ. ತೀರ್ಪುಗಾರರ ವಿಶೇಷ ಪ್ರಶಸ್ತಿ.

ಹೊಂಬಾಳೆ ಫಿಲಂಸ್‍ ನಿರ್ಮಾಣದ, ರಿಷಭ್‍ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ ಚಿತ್ರದ ಪೂರ್ವ ಭಾಗವಾದ ‘ಕಾಂತಾರ – ಅಧ್ಯಾಯ 1’, ಸೋಮವಾರವಷ್ಟೇ ಅದ್ಧೂರಿಯಾಗಿ ಪ್ರಾರಂಭವಾಗಿತ್ತು. ಇಂದು ಚಿತ್ರವು ಇನ್ನೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ.ಮಂಗಳವಾರ, ಗೋವಾದಲ್ಲಿ ಮುಕ್ತಾಯವಾದ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಹೊಂಬಾಳೆ ಫಿಲಂಸ್ ನಿರ್ಮಾಣದ, ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರಕ್ಕೆ ತೀರ್ಪುಗಾರರ ವಿಶೇಷ ಪ್ರಶಸ್ತಿ ಸಿಕ್ಕಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಇಂಥದ್ದೊಂದು ಪ್ರಶಸ್ತಿಗೆ ಭಾಜನವಾಗಿದೆ. ಈ ಬಾರಿ ಅಂತಾರಾಷ್ಟ್ರೀಯ ಸ್ಪರ್ಧಾ ವಿಭಾಗದಲ್ಲಿ…

ಕಾಂತಾರ ಅಧ್ಯಾಯ ೧’ರ ಮೊದಲ ನೋಟ ಬಿಡುಗಡೆ. ಕುಂದಾಪುರದ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಸರಳಪೂಜೆಯೊಂದಿಗೆ ಚಿತ್ರಕ್ಕೆ ಚಾಲನೆ‌

ಕಾಂತಾರ ಅಧ್ಯಾಯ ೧’ರ ಮೊದಲ ನೋಟ ಬಿಡುಗಡೆ. ಕುಂದಾಪುರದ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಸರಳಪೂಜೆಯೊಂದಿಗೆ ಚಿತ್ರಕ್ಕೆ ಚಾಲನೆ‌

ಕಳೆದ ವರ್ಷ ಬಿಡುಗಡೆಯಾಗಿ ಜಗತ್ತಿನಾದ್ಯಂತ ಮೆಚ್ಚುಗೆ ಪಡೆಯುವುದರ ಜೊತೆಗೆ ದೊಡ್ಡ ಯಶಸ್ಸು ಕಂಡ ‘ಕಾಂತಾರ’ ಚಿತ್ರವನ್ನು ನಿರ್ಮಿಸಿದ್ದ ಹೊಂಬಾಳೆ ಫಿಲಂಸ್, ಈಗ ಇನ್ನೊಂದು ಅಂಥದ್ದೇ ಪ್ರಯತ್ನದೊಂದಿಗೆ ವಾಪಸಾಗುತ್ತಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ ಮಹತ್ವಾಕಾಂಕ್ಷೆಯ ಮತ್ತು ಬಹುನಿರೀಕ್ಷಿತ ಚಿತ್ರವಾದ ‘ಕಾಂತಾರ – ಅಧ್ಯಾಯ ೧’ರ ಮೊದಲ ನೋಟ ಬಿಡುಗಡೆಯಾಗಿದ್ದು, ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿದೆ. ‘ಕಾಂತಾರ’ ಜಗತ್ತನ್ನು ಪರಿಚಯಿಸುವ ಈ ಟೀಸರ್ ನಲ್ಲಿ ರಿಷಭ್ ಶೆಟ್ಟಿ ಅವರ ಪಾತ್ರ ಮತ್ತು ವೇಷ ಗಮನ ಸೆಳೆಯುತ್ತದೆ. ಮೊದಲ ಭಾಗದ ಆ ಆರ್ಭಟ ಇಲ್ಲೂ…

ರಿಷಭ್‍ ಶೆಟ್ಟಿ ಐಕಾನಿಕ್‍ ಡೈರೆಕ್ಟರ್; ರಕ್ಷಿತ್‍ ಶೆಟ್ಟಿ ಟ್ರೆಂಡಿಂಗ್‍ ಆ್ಯಕ್ಷರ್ 6ನೇ ಇನ್ನೋವೇಟೀವ್‍ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ

ರಿಷಭ್‍ ಶೆಟ್ಟಿ ಐಕಾನಿಕ್‍ ಡೈರೆಕ್ಟರ್; ರಕ್ಷಿತ್‍ ಶೆಟ್ಟಿ ಟ್ರೆಂಡಿಂಗ್‍ ಆ್ಯಕ್ಷರ್ 6ನೇ ಇನ್ನೋವೇಟೀವ್‍ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ

ಕಳೆದ ವರ್ಷ ತಮ್ಮ ವಿಭಿನ್ನ ಪ್ರಯತ್ನದಿಂದ ಕನ್ನಡ ಚಿತ್ರರಂಗಕ್ಕೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯತೆ ತಂದುಕೊಟ್ಟ ‘ಕಾಂತಾರ’ ಖ್ಯಾತಿಯ ರಿಷಭ್‍ ಶೆಟ್ಟಿ ಈಗ ‘ಐಕಾನಿಕ್‍ ಡೈರೆಕ್ಟರ್’ ಆಗಿ ಹೊರಹೊಮ್ಮಿದ್ದಾರೆ. ಇನ್ನು, ‘777 ಚಾರ್ಲಿ’ ಚಿತ್ರದಲ್ಲಿ ತಮ್ಮ ಅದ್ಭುತ ಅಭಿನಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾದ ರಕ್ಷಿತ್‍ ಶೆಟ್ಟಿ ‘ಟ್ರೆಂಡಿಂಗ್‍ ಆ್ಯಕ್ಟರ್’ ಆಗಿದ್ದಾರೆ. ಅವರಿಬ್ಬರಿಗೂ ಇಂಥದ್ದೊಂದು ಪ್ರಶಸ್ತಿಗೆ ಭಾಜನರಾಗಿರುವುದು ಇನ್ನೋವೇಟೀವ್‍ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ. ಇನ್ನೋವೇಟೀವ್‍ ಫಿಲಂ ಅಕಾಡೆಮಿ ಮತ್ತು ಇನ್ನೋವೇಟೀವ್‍ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಸ್ಥಾಪಕ ಶರವಣ…

ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅತ್ಯಂತ ಮೆಚ್ಚುಗೆ ಪಡೆದ ರಿಷಬ್ ಶೆಟ್ಟಿ ಸಂಸ್ಥೆಯ ಹೆಮ್ಮೆಯ ಚಲನಚಿತ್ರ, “ಶಿವಮ್ಮ,”

ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅತ್ಯಂತ ಮೆಚ್ಚುಗೆ ಪಡೆದ ರಿಷಬ್ ಶೆಟ್ಟಿ ಸಂಸ್ಥೆಯ ಹೆಮ್ಮೆಯ ಚಲನಚಿತ್ರ, “ಶಿವಮ್ಮ,”

ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅತ್ಯಂತ ಮೆಚ್ಚುಗೆ ಪಡೆದ ರಿಷಬ್ ಶೆಟ್ಟಿ ಸಂಸ್ಥೆಯ ಹೆಮ್ಮೆಯ ಚಲನಚಿತ್ರ, “ಶಿವಮ್ಮ,” ಬುಸಾನ್ ಚಲನಚಿತ್ರೋತ್ಸವ ಸೇರಿದಂತೆ ಜಗತ್ತಿನಾದ್ಯಂತ ಹಲವಾರು ಪ್ರತಿಷ್ಠಿತ ಚಲನಚಿತ್ರೋತ್ಸವಗಳ ಮೂಲಕ ಒಂದು ವರ್ಷದ ಪ್ರಯಾಣದ ನಂತರ ಅಂತಿಮವಾಗಿ ಭಾರತಕ್ಕೆ ಆಗಮಿಸಲಿದೆ. ಭಾರತದ ಪ್ರತಿಷ್ಠಿತ ಮಾಮಿ ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದಕ್ಷಿಣ ಏಷ್ಯಾದ ಚೊಚ್ಚಲ ಪ್ರದರ್ಶನವನ್ನು ಕಾಣುತ್ತಿದೆ.’ “ಶಿವಮ್ಮ” ಚಿತ್ರವನ್ನು ಸಂಪೂರ್ಣವಾಗಿ ಉತ್ತರ ಕರ್ನಾಟಕದ ಕೊಪ್ಪಳ ಜಿಲ್ಲೆಯ ಯರೇಹಂಚಿನಾಳ ಗ್ರಾಮದಲ್ಲಿ ಚಿತ್ರೀಕರಿಸಲಾಗಿದ್ದು,ಊರಿನ ಗ್ರಾಮಸ್ಥರೇ ಮುಖ್ಯ ತಾರಾಗಣದಲ್ಲಿದ್ದಾರೆ. ತನ್ನ ಕುಟುಂಬದ ಉನ್ನತಿಗೋಸ್ಕರ ನೆಟ್ವರ್ಕ್ ಮಾರ್ಕೆಟಿಂಗ್…