ಮೈಸೂರಿನ ನಂದಗೋಕುಲ ಗೃಹ ನಿರ್ಮಾಣ ಸಹಕಾರ ಸಂಘದಿಂದ ಚಿತ್ರತಂಡದ ಸದಸ್ಯರಿಗೆ ಕಡಿಮೆ ಬೆಲೆಗೆ ನಿವೇಶನ ನೀಡುವ ಯೋಜನೆ .
ನಂದಗೋಕುಲ ಗೃಹ ನಿರ್ಮಾಣ ಸಹಕಾರ ಸಂಘ, ಮೈಸೂರಿನಲ್ಲಿ ಚಿತ್ರನಗರಿ ಬಡವಾಣೆ ಮತ್ತು ಗಂಧದ ಗುಡಿ ಫಮಲ್ಯಾಂಡ್ ನಿರ್ಮಿಸುವ ಪ್ರಯತ್ನದಲ್ಲಿದ್ದು, ಆ ಮೂಲಕ ಚಲನಚಿತ್ರರಂಗದ ಎಲ್ಲಾ ವರ್ಗದವರಿಗೆ ಹಾಗೂ ಸಾರ್ವಜನಿಕರಿಗೆ ಒಂದೇ ಸೂರಿನಡಿ ಕಡಿಮೆ ಬೆಲೆಗೆ ನಿವೇಶನ ನೀಡುವ ಯೋಜನೆ ಹಾಕಿಕೊಂಡಿದೆ. ಈ ಕುರಿತು ಮೈಸೂರು, ಮಂಡ್ಯ, ಕೊಡಗು, ಹಾಸನ ಹಾಗೂ ಚಾಮರಾಜನಗರ ಐದು ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಸರ್ಕಾರದಿಂದ ಮಾನ್ಯತೆ ಪಡೆದುಕೊಳ್ಳಲಾಗಿದೆ. ಮೈಸೂರು – ಬನ್ನೂರು ರಸ್ತೆಯಲ್ಲಿ ಈಗಾಗಲೇ 50 ಎಕರೆ ಜಾಗವನ್ನು ನೋಡಲಾಗಿದೆ. ಯಾವುದೇ ಅಡೆತಡೆಗಳಿಲ್ಲದೆ…