ನಾಯಕ ಧನ್ವೀರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ . ಪೋಸ್ಟರ್ ಬಿಡುಗಡೆ ಮಾಡಿ ಶುಭಕೋರಿದ “ಹಯಗ್ರೀವ” ಚಿತ್ರತಂಡ .
ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ನಾಯಕ ಧನ್ವೀರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂಧರ್ಭದಲ್ಲಿ ಕೆ.ವಿ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ರಘುಕುಮಾರ್ ಓ.ಆರ್ ನಿರ್ದೇಶನದಲ್ಲಿ ಧನ್ವೀರ್ ನಾಯಕರಾಗಿ ನಟಿಸುತ್ತಿರುವ “ಹಯಗ್ರೀವ” ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಈ ಮೂಲಕ ನಾಯಕ ಧನ್ವೀರ್ ಅವರಿಗೆ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಧನ್ವೀರ್ ಅವರ “ಹಯಗ್ರೀವ” ಚಿತ್ರದ ಪಾತ್ರ ಏನಿರಬಹುದೆಂಬ ಕುತೂಹಲ ಅಭಿಮಾನಿಗಳಿಗಿತ್ತು. ಇಂದು ಬಿಡುಗಡೆಯಾಗಿರುವ ಪೋಸ್ಟರ್ ನಲ್ಲಿ ಧನ್ವೀರ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಧನ್ವೀರ್…