ಮಾರ್ಚ್ 27 ಕ್ಕೆ “ಆಯಧ” ಹಿಡಿದು ಬರಲಿದ್ದಾರೆ ದೇವರಾಜ್ ಕುಮಾರ್ . ಟ್ರೇಲರ್ ನಲ್ಲೇ ಮೋಡಿ ಮಾಡಿದೆ ಆಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಡ್ರಾಮ ಕಥಾಹಂದರ ಹೊಂದಿರುವ ಈ ಚಿತ್ರ .
ದೇವರಾಜ್ ಕುಮಾರ್ ನಿರ್ಮಾಣ, ನಿರ್ದೇಶನ ಹಾಗೂ ನಟನೆಯ “ಆಯುಧ ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಸಿರಿ ಮ್ಯೂಸಿಕ್ ಚಾನಲ್ ನಲ್ಲಿ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ. ಈಗಾಗಲೇ ಟ್ರೇಲರ್, ಟೀಸರ್ ಹಾಗೂ ಹಾಡುಗಳ ಮೂಲಕ ಜನಪ್ರಿಯವಾಗಿರುವ ಈ ಚಿತ್ರ ಮಾರ್ಚ್ 27 ರಂದು ಬಿಡುಗಡೆಯಾಗಲಿದೆ. ಟ್ರೇಲರ್ ಬಿಡುಗಡೆ ನಂತರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.ಕಳೆದ ಎರಡು ದಶಕಗಳಿಂದ ಮೇಕಪ್ ಕಲಾವಿದನಾಗಿ ಕನ್ನಡ ಚಿತ್ರರಂಗದೊಂದಿಗೆ ನಂಟು ಹೊಂದಿರುವ…
