ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರಕ್ಕೆ ಪ್ರಿಯಾ ಆನಂದ್ ನಾಯಕಿ. .ಹೊಸವರ್ಷದ ಆರಂಭದ ದಿನ ಪೋಸ್ಟರ್ ಬಿಡುಗಡೆ ಮಾಡಿ ನಾಯಕಿಯನ್ನು ಸ್ವಾಗತಿಸಿದ ಚಿತ್ರತಂಡ .
ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರು ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸುತ್ತಿರುವ ಹಾಗೂ “ಆ ದಿನಗಳು” ಖ್ಯಾತಿಯ ಕೆ.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಚಿತ್ರ “ಬಲರಾಮನ ದಿನಗಳು”. ಇದು ವಿನೋದ್ ಪ್ರಭಾಕರ್ ಅಭಿನಯದ 25 ನೇ ಚಿತ್ರ ಕೂಡ.ಬಹು ನಿರೀಕ್ಷಿತ “ಬಲರಾಮನ ದಿನಗಳು” ಚಿತ್ರಕ್ಕೆ ಪ್ರಿಯಾ ಆನಂದ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. “ರಾಜಕುಮಾರ”, “ಜೇಮ್ಸ್”, “ಆರೆಂಜ್”, “ಕರಟಕ ದಮನಕ” ದಂತಹ ಯಶಸ್ವಿ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿ ಪ್ರಿಯಾ ಆನಂದ್ ಜನಪ್ರಿಯರಾಗಿದ್ದಾರೆ. ಹೊಸವರ್ಷದ…