ಪುನೀತ್ ರಾಜಕುಮಾರ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಲಿದೆ ‘ರತ್ನ’ ಚಿತ್ರದ ಟ್ರೇಲರ್ ಇದು ಅಪ್ಪು ಅಭಿಮಾನಿಯ ಚಿತ್ರ
ಬಸವರಾಜ್ ಬಳ್ಳಾರಿ ನಿರ್ಮಿಸಿ, ನಿರ್ದೇಶಿಸಿರುವ “ರತ್ನ” ಚಿತ್ರದ ಟ್ರೇಲರ್ ಮಾರ್ಚ್ 17, ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದಂದು ಬಿಡುಗಡೆಯಾಗಲಿದೆ. ಚಿತ್ರದಲ್ಲಿ ನಾಯಕಿ ಪುನೀತ್ ರಾಜಕುಮಾರ್ ಅಭಿಮಾನಿ ಆಗಿರುತ್ತಾಳೆ. ಅಪ್ಪು ಅಭಿಮಾನಿಯ ಸುತ್ತ ಈ ಚಿತ್ರದ ಕಥೆ ಹೆಣೆಯಲಾಗಿದೆ ಎಂದು ನಿರ್ದೇಶಕ ಬಸವರಾಜ್ ಬಳ್ಳಾರಿ ತಿಳಿಸಿದ್ದಾರೆ. ಇತ್ತೀಚಿಗೆ “ರತ್ನ” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು ಪ್ರಮಾಣಪತ್ರ ನೀಡಿದೆ. ಏಪ್ರಿಲ್ ನಲ್ಲಿ ಚಿತ್ರ ತೆರೆಗೆ ಬರಲಿದೆ. ನಿರ್ದೇಶಕ ಬಸವರಾಜ್ ಬಳ್ಳಾರಿ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ…