ಹೊಂಬಾಳೆ ಫಿಲಂಸ್ ನಿರ್ಮಾಣದ, ಪ್ರಶಾಂತ್ ನೀಲ್ ನಿರ್ದೇಶನದ ಹಾಗು ಯಶ್ ಅಭಿನಯದ “ಕೆ.ಜಿ.ಎಫ್ ೨” ಚಿತ್ರಕ್ಕೆ ಎರಡು ರಾಷ್ಟ್ರ ಪ್ರಶಸ್ತಿಗಳು . ದೆಹಲಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕಾರ .
ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿರುವ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಯಶ್ ನಾಯಕರಾಗಿ ನಟಿಸಿದ್ದ ಜಗತ್ತೇ ಮೆಚ್ಚಿದ ಜನಪ್ರಿಯ ಚಿತ್ರ “ಕೆ.ಜಿ.ಎಫ್ ೨”. 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಈ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಹಾಗೂ ಈ ಚಿತ್ರದ ಸಾಹಸ ನಿರ್ದೇಶಕ ಅನ್ವರಿವು ಅವರಿಗೆ ಅತ್ಯುತ್ತಮ ಸಾಹಸ ಸಂಯೋಜನೆಗಾಗಿ ರಾಷ್ಟ್ರ ಪ್ರಶಸ್ತಿ ಬಂದಿದೆ. ದೆಹಲಿಯಲ್ಲಿ ನಡೆದ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಹೊಂಬಾಳೆ ಫಿಲಂಸ್ ನ…