ಸ್ಯಾಂಡಲ್ವುಡ್ನ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ಮತ್ತು ಚಿತ್ರ ನಿರ್ಮಾಪಕ ಸುಧನ್ ಸುಂದರಂ ನಿಶ್ಚಿತಾರ್ಥ
ದಕ್ಷಿಣ ಭಾರತದ ಚಿತ್ರರಂಗದ ಜನಪ್ರಿಯ ನಟಿ ಹಾಗೂ ನಿರ್ಮಾಪಕಿ ಶರ್ಮಿಳಾ ಮಾಂಡ್ರೆ ಮತ್ತು ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ಸುಧನ್ ಸುಂದರಂ ಅವರು ತಮ್ಮ ನಿಶ್ಚಿತಾರ್ಥದ ಸಂಭ್ರಮದಲ್ಲಿದ್ದಾರೆ. ಆಪ್ತ ಕುಟುಂಬಸ್ಥರು ಹಾಗೂ ಹಿತೈಷಿಗಳ ಸಮ್ಮುಖದಲ್ಲಿ ನಡೆದ ಸರಳ ಹಾಗೂ ಅತ್ಯಂತ ಸುಂದರ ಸಮಾರಂಭದಲ್ಲಿ ಉಭಯ ಕುಶಲೋಪರಿಗಳೊಂದಿಗೆ ಇಬ್ಬರೂ ಉಂಗುರ ಬದಲಾಯಿಸಿಕೊಂಡಿದ್ದಾರೆ. ಸಿನಿಮಾ ಹಾಗೂ ಸಾಂಪ್ರದಾಯಿಕ ಮೌಲ್ಯಗಳ ಬಗ್ಗೆ ಅಪಾರ ಗೌರವ ಹೊಂದಿರುವ ಈ ಜೋಡಿಯ ನಿಶ್ಚಿತಾರ್ಥದ ವೇದಿಕೆಯು ಬಿಳಿ ಹೂವುಗಳ ಅಲಂಕಾರ ಹಾಗೂ ಅತ್ಯಾಧುನಿಕ ಶೈಲಿಯ ವಿನ್ಯಾಸದಿಂದ…
