“ಪಿಚ್ಚರ್” ಚಿತ್ರದ “ಗೋಕುಲದ ರಾಧೆ” ಹಾಡು ಹಾಡುವ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್
ಸದಭಿರುಚಿ ಚಿತ್ರಗಳ ನಿರ್ಮಾಪಕಿ ಈಗ ಗಾಯಕಿ . ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ಪ್ರಸ್ತುತ ಕನ್ನಡ ಹಾಗೂ ತುಳುವಿನಲ್ಲಿ ನಿರ್ಮಿಸಿರುವ ಚಿತ್ರ “ಪಿಚ್ಚರ್”. ಸಂದೀಪ ಬೆದ್ರ ನಿರ್ದೇಶನದ ಈ ಚಿತ್ರದ ನಾಯಕರಾಗಿ ನಿತ್ಯಪ್ರಕಾಶ್ ಬಂಟ್ವಾಳ್ ನಟಿಸಿದ್ದಾರೆ. ಈ ಚಿತ್ರದ ವಿಶೇಷವೆಂದರೆ ನಿರ್ಮಾಪಕಿ ಶಿಲ್ಪಾ ಗಣೇಶ್ “ಗೋಕುಲದ ರಾಧೆ” ಎಂಬ ಹಾಡನ್ನು ಕನ್ನಡ ಹಾಗೂ ತುಳು ಎರಡು ಭಾಷೆಗಳಲ್ಲೂ ಹಾಡಿದ್ದಾರೆ. ಈ ಮೂಲಕ ನಿರ್ಮಾಪಕಿಯಾಗಿದ್ದ ಶಿಲ್ಪಾ ಗಣೇಶ್…
