ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿ. ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನಮಂಟಪ’ ಚಿತ್ರದ ಚಿತ್ರೀಕರಣ ಮುಕ್ತಾಯ
ಮೈಸೂರಿನ ಬಾಬುನಾಯ್ಕ್ ಅವರು ತಮ್ಮ ಮಲೈಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ‘ಸ್ವಪ್ನಮಂಟಪ’ ಎಂಬ ಕನ್ನಡ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರವು ಬರಗೂರು ರಾಮಚಂದ್ರಪ್ಪನವರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ. ಬರಗೂರು ರಾಮಚಂದ್ರಪ್ಪನವರೇ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶನ ಮಾಡಿದ್ದಾರೆ. ‘ಸ್ವಪ್ನಮಂಟಪ’ ಚಿತ್ರವು ಈಗಾಗಲೇ ಚಿತ್ರೀಕರಣ ಮತ್ತು ಡಬ್ಬಿಂಗ್ ಕೆಲಸಗಳನ್ನು ಮುಗಿಸಿದೆ. ಕನಕಪುರ ರಸ್ತೆಯ ಒಂದು ಹಳ್ಳಿಯಲ್ಲಿ ಚಿತ್ರೀಕರಣವನ್ನು ಮಾಡಲಾಗಿದೆ. ಹೊಸಮನೆ ಮೂರ್ತಿಯವರು ಈ ಸೆಟ್ ನಿರ್ಮಾಣ ಮಾಡಿದ್ದಾರೆ.‘ಸ್ವಪ್ನಮಂಟಪ’ ಚಿತ್ರವು ಪಾರಂಪರಿಕ ಸ್ಥಳಗಳ ರಕ್ಷಣೆಯನ್ನು ಪ್ರತಿಪಾದಿಸುವ ಕಥಾವಸ್ತುವನ್ನು…