“ಮಹಾನ್” ಚಿತ್ರದಲ್ಲಿ ಡಾ||ಶಿವರಾಜಕುಮಾರ್. ವಿಜಯ ರಾಘವೇಂದ್ರ ಅಭಿನಯದ ಈ ಚಿತ್ರದ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ ಕರುನಾಡ ಚಕ್ರವರ್ತಿ .
ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ನಿರ್ಮಿಸುತ್ತಿರುವ, ಪಿ.ಸಿ.ಶೇಖರ್ ನಿರ್ದೇಶಿಸುತ್ತಿರುವ “ಮಹಾನ್” ಚಿತ್ರದ ವಿಶೇಷಪಾತ್ರದಲ್ಲಿ ಕರುನಾಡ ಚಕ್ರವರ್ತಿ ಡಾ||ಶಿವರಾಜಕುಮಾರ್ ಅಭಿನಯಿಸಿದ್ದಾರೆ. ವಿಜಯ್ ರಾಘವೇಂದ್ರ ಈ ಚಿತ್ರದ ನಾಯಕರಾಗಿ ನಟಿಸಿದ್ದಾರೆ. ಬಹಳ ವರ್ಷಗಳ ನಂತರ ಶಿವರಾಜಕುಮಾರ್ ಹಾಗೂ ವಿಜಯ ರಾಘವೇಂದ್ರ ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ “ಮಹಾನ್” ರೈತರ ಕುರಿತಾದ ಕಥಾಹಂದರ ಹೊಂದಿರುವ ಚಿತ್ರ. ಈ ಚಿತ್ರದಲ್ಲಿ ಬರುವ ಪ್ರತಿಯೊಂದು ಪಾತ್ರವೂ ಮುಖ್ಯ ಪಾತ್ರಗಳಾಗಿರುತ್ತದೆ. ಮನೆಯಲ್ಲಿ ನಾವೇನಾದರೂ ತಪ್ಪು ಮಾಡಿದರೆ, ನಮಗೆ ಬುದ್ದಿ ಹೇಳಲು ತಂದೆ – ತಾಯಿ ಇರುತ್ತಾರೆ….
