ಟ್ರೇಲರ್ ನಲ್ಲೇ ಮೋಡಿ ಮಾಡಿದ “ಬ್ಯಾಚುಲರ್ ಪಾರ್ಟಿ” . ರಕ್ಷಿತ್ ಶೆಟ್ಟಿ ನಿರ್ಮಾಣದ ಈ ಚಿತ್ರ ಜನವರಿ 26 ರಂದು ತೆರೆಗೆ .
ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ ಎಸ್ ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಾಣದ, ಅಭಿಜಿತ್ ಮಹೇಶ್ ನಿರ್ದೇಶನದ, ದಿಗಂತ್, ಲೂಸ್ ಮಾದ ಯೋಗಿ, ಅಚ್ಯುತಕುಮಾರ್ ಪ್ರಮುಖಪಾತ್ರದಲ್ಲಿ ನಟಿಸಿರುವ “ಬ್ಯಾಚುಲರ್ ಪಾರ್ಟಿ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಪಂಚಿಂಗ್ ಡೈಲಾಗ್ ಗಳ ಮೂಲಕ ಟ್ರೇಲರ್ ಎಲ್ಲರನ್ನೂ ಮೋಡಿ ಮಾಡುತ್ತಿದೆ . ಟ್ರೇಲರ್ ಬಿಡುಗಡೆಯ ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು. ನಾನು ಕಿರುಚಿತ್ರ ಮಾಡುತ್ತಿದ್ದ ಸಮಯದಲ್ಲಿ ನನಗೆ ಅಭಿಜಿತ್ ಮಹೇಶ್ ಪರಿಚಯವಾದರು. “ಕಿರಿಕ ಪಾರ್ಟಿ”, ” ಅವನೇ ಶ್ರೀಮನ್ನಾರಾಯಣ”…