ರೇವಣ ಸಿದ್ದೇಶ್ವರ ಬೆಟ್ಟದಲ್ಲಿ “ಕುಲದಲ್ಲಿ ಕೀಳ್ಯಾವುದೊ” ಚಿತ್ರಕ್ಕೆ ಭರ್ಜರಿ ಕ್ಲೈಮ್ಯಾಕ್ಸ್. ಸಾಹಸ ಸನ್ನಿವೇಶದಲ್ಲೂ ಸೈ ಎನಿಸಿಕೊಂಡ ಮಡೆನೂರ್ ಮನು.
ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಕ್ಲೈಮ್ಯಾಕ್ಸ್ ಭಾಗದ ಸಾಹಸ ಸನ್ನಿವೇಶದ ಚಿತ್ರೀಕರಣ ರಾಮನಗರದ ಸಮೀಪ ಅದ್ದೂರಿಯಾಗಿ ನೆರವೇರಿತು. ವಿನೋದ್ ಮಾಸ್ಟರ್ ಸಾಹಸ ನಿರ್ದೇಶನದಲ್ಲಿ ನಾಯಕ ಮಡೆನೂರ್ ಮನು, ನಾಯಕಿ ಮೌನ ಗುಡ್ಡಮನೆ, ಶರತ್ ಲೋಹಿತಾಶ್ವ, ಕರಿ ಸುಬ್ಬು, ಡ್ರ್ಯಾಗನ್ ಮಂಜು, ಸೀನ ಮುಂತಾದವರು ಸಾಹಸ…