ನಗುವಿನ ಹಬ್ಬಕ್ಕೆ ಸಜ್ಜಾದ ‘ರಿಲ್ಯಾಕ್ಸ್’. ಕೋಮಲ್–ಸೋನಲ್ ಜೋಡಿ, ವಿನೋದ್ ಪ್ರಭಾಕರ್ ವಿಶೇಷ ಪಾತ್ರ. ನವೆಂಬರ್ 27ಕ್ಕೆ ಅದ್ದೂರಿ ಬಿಡುಗಡೆ
ಕನ್ನಡ ಚಿತ್ರರಂಗದಲ್ಲಿ ತಮ್ಮ ವಿಭಿನ್ನ ನಟನೆಯ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿರುವ ನಟ ಕೋಮಲ್ ಕುಮಾರ್ ಇದೀಗ ನಟಿ ಸೋನಲ್ ಮೊಂತೆರೊ ಅವರೊಂದಿಗೆ ‘ರಿಲ್ಯಾಕ್ಸ್’ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಅಂಬಟಿ ಮಧುಮೋಹನ್ ಕೃಷ್ಣ ನಿರ್ಮಾಣದ, ಶ್ರೀನಿವಾಸ್ ಮಂಡ್ಯ ನಿರ್ದೇಶನದ ಈ ಚಿತ್ರಕ್ಕೆ ಮುರಳಿಕೃಷ್ಣ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. ಚಿತ್ರದಲ್ಲಿ ನಟ ವಿನೋದ್ ಪ್ರಭಾಕರ್ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದು, ನವೆಂಬರ್ 27ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ನಿರ್ಮಾಪಕರಾದ…
