ಮಂತ್ರಾಲಯ ಮಠಾಧೀಶರಾದ ಶ್ರೀಸುಬುಧೇಂದ್ರ ತೀರ್ಥರಿಂದ “ಶ್ರೀಜಗನ್ನಾಥದಾಸರು ಭಾಗ ೨” ಚಿತ್ರದ ಹಾಡುಗಳ ಅನಾವರಣ .

ಮಂತ್ರಾಲಯ ಮಠಾಧೀಶರಾದ ಶ್ರೀಸುಬುಧೇಂದ್ರ ತೀರ್ಥರಿಂದ “ಶ್ರೀಜಗನ್ನಾಥದಾಸರು ಭಾಗ ೨” ಚಿತ್ರದ ಹಾಡುಗಳ ಅನಾವರಣ .

ನಾಡಿನ ಪ್ರಸಿದ್ದ ಹರಿದಾಸರ ಜೀವನ ಚರಿತ್ರೆಯನ್ನು ಮಧುಸೂದನ್ ಹವಾಲ್ದಾರ್ ಅವರು ಸಿನಿಮಾ ಮೂಲಕ ಜನರಿಗೆ ಪರಿಚಯಿಸಿಸುತ್ತಿದ್ದಾರೆ. ದಾಸಶ್ರೇಷ್ಠರಾದ “ಶ್ರೀಜಗನ್ನಾಥದಾಸರು”, ” ಶ್ರೀವಿಜಯದಾಸರು”, “ಶ್ರೀಮಹಿಪತಿದಾಸರು”, ” ಶ್ರೀಪ್ರಸನ್ನವೆಂಕಟದಾಸರು” ಮುಂತಾದ ಮಹಾಮಹಿಮರ ಕುರಿತಾದ ಚಿತ್ರಗಳು ಈಗಾಗಲೇ ಬಿಡುಗಡೆಯಾಗಿದೆ. ಪ್ರಸ್ತುತ “ಶ್ರೀಜಗನ್ನಾಥದಾಸರು ಭಾಗ ೨” ಚಿತ್ರ ಸಹ ತೆರೆಗೆ ಬರಲು ಸಿದ್ದವಾಗಿದ್ದು, ಇತ್ತೀಚೆಗೆ ಹಾಡುಗಳು ಅನಾವರಣವಾಗಿದೆ. ಗಾಯನ ಸಮಾಜದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಮಂತ್ರಾಲಯ ಮಠಾಧೀಶರಾದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು “ಶ್ರೀಜಗನ್ನಾಥದಾಸರು ಭಾಗ ೨” ಚಿತ್ರದ ಹಾಡುಗಳನ್ನು ಲೋಕಾರ್ಪಣೆ ಮಾಡಿದರು. ಮಧುಸೂದನ್…