“ಬೃಂದಾವಿಹಾರಿ”ಯಾದ ಗೋಲ್ಡನ್ ಸ್ಟಾರ್ ಗಣೇಶ್ ಯುಗಾದಿ ಹಬ್ಬದ ಸಂದರ್ಭದಲ್ಲಿ ಸಮೃದ್ಧಿ ವಿ ಮಂಜುನಾಥ್ ನಿರ್ಮಾಣ ಹಾಗೂ ಶ್ರೀನಿವಾಸರಾಜು ನಿರ್ದೇಶನದ ಬಹು ನಿರೀಕ್ಷಿತ ಚಿತ್ರದ ಶೀರ್ಷಿಕೆ ಅನಾವರಣ.
ಸೂಪರ್ ಹಿಟ್ ” ಕೃಷ್ಣಂ ಪ್ರಣಯ ಸಖಿ” ಚಿತ್ರದ ನಂತರ ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಶ್ರೀನಿವಾಸರಾಜು ಅವರ ಕಾಂಬಿನೇಶನ್ ನಲ್ಲಿ ಹೊಸಚಿತ್ರವೊಂದು ಆರಂಭವಾಗಿತ್ತು. ವಿರಾಟ್ ಸಾಯಿ ಕ್ರಿಯೇಷನ್ಸ್ ಅರ್ಪಿಸುವ ಈ ಚಿತ್ರವನ್ನು ಸದಭಿರುಚಿ ಚಿತ್ರಗಳ ನಿರ್ಮಾಪಕ ಸಮೃದ್ಧಿ ವಿ ಮಂಜುನಾಥ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ಪ್ರಸ್ತುತ ಯುಗಾದಿ ಹಬ್ಬದ ಶುಭ ಸಂದರ್ಭದಲ್ಲಿ ಈ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ರೊಮ್ಯಾಂಟಿಕ್ ಜಾನರ್ ನ ಈ ಚಿತ್ರಕ್ಕೆ “ಬೃಂದಾವಿಹಾರಿ” ಎಂದು ಹೆಸರಿಡಲಾಗಿದೆ. ಈ ಸುಂದರ ಶೀರ್ಷಿಕೆಗೆ ಮೆಚ್ಚುಗೆಯ ಮಹಾಪೂರವೇ…
