ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ “ಇಮೇಲ್” ಚಿತ್ರದ ಟೀಸರ್ ಅನಾವರಣ . ರಾಗಿಣಿ ದ್ವಿವೇದಿ ನಾಯಕಿಯಾಗಿ ನಟಿಸಿರುವ ಈ ಚಿತ್ರ ಸದ್ಯದಲ್ಲೇ ಬಿಡುಗಡೆ .ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ “ಇಮೇಲ್” ಚಿತ್ರದ ಟೀಸರ್ ಅನಾವರಣ .
ಎಸ್ ಆರ್ ಫಿಲಂ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ, ರಾಗಿಣಿ ದ್ವಿವೇದಿ ನಾಯಕಿಯಾಗಿ ನಟಿಸಿರುವ, ತಮಿಳು ಹಾಗೂ ಕನ್ನಡ ಭಾಷೆಗಳಲ್ಲಿ ನಿರ್ಮಾಣವಾಗಿರುವ “ಇಮೇಲ್” ಚಿತ್ರದ ಕನ್ನಡ ಅವತರಣಿಕೆಯ ಟೀಸರ್ ಬಿಡುಗಡೆಯಾಗಿದೆ. ಟೀಸರ್ ಅನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. “ಇಮೇಲ್” ಚಿತ್ರದ ಟೀಸರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಹು ನಿರೀಕ್ಷಿತ ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗುತ್ತಿದೆ. ಎಸ್ ಆರ್ ರಾಜನ್ ಅವರು “ಇಮೇಲ್” ಚಿತ್ರವನ್ನು ನಿರ್ಮಿಸಿ, ನಿರ್ದೇಶನ ಮಾಡಿದ್ದಾರೆ….