ಭಾರತೀಯ ಚಿತ್ರರಂಗದಲ್ಲಿ ಮತ್ತೊಂದು ಸಂಚಲನ: ಹೊಂಬಾಳೆ ಫಿಲ್ಮ್ಸ್, ನಟ ಸೂರ್ಯ ಹಾಗೂ ‘ಜೈ ಭೀಮ್’ ನಿರ್ದೇಶಕ ಜ್ಞಾನವೇಲ್ ಅಪೂರ್ವ ಸಂಯೋಜನೆ ಘೋಷಣೆ!
ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯು ತನ್ನ ಮುಂದಿನ ಮಹತ್ವಾಕಾಂಕ್ಷೆಯ ಚಿತ್ರವನ್ನು ಅಧಿಕೃತವಾಗಿ ಘೋಷಿಸಿದೆ. ವಿಜಯ್ ಕಿರಗಂದೂರು ನಿರ್ಮಿಸಲಿರುವ ಈ ಚಿತ್ರಕ್ಕಾಗಿ ಜನಪ್ರಿಯ ನಟ ಸೂರ್ಯ, ನಟಿ ಕಾಯಾದು ಲೋಹರ್ ಮತ್ತು ಖ್ಯಾತ ನಿರ್ದೇಶಕ ಟಿ. ಜೆ. ಜ್ಞಾನವೇಲ್ ಕೈಜೋಡಿಸಿದ್ದು, ಪ್ರಭಾವಶಾಲಿ ಕಥಾಹಂದರ ಹಾಗೂ ಭವ್ಯ ದೃಶ್ಯವೈಭವದ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ. ಭಾರತೀಯ ಚಿತ್ರರಂಗದ ಯಶಸ್ವಿ ನಟರಲ್ಲಿ ಒಬ್ಬರಾದ ಸೂರ್ಯ, ಕಳೆದ ಎರಡು ದಶಕಗಳಿಂದ ತಮ್ಮ ವೈವಿಧ್ಯಮಯ ನಟನೆ ಮತ್ತು ಧೀಮಂತ ಪಾತ್ರಗಳ ಮೂಲಕ ಪ್ರೇಕ್ಷಕರ ಮನಗೆದ್ದಿದ್ದಾರೆ. ಎರಡು…
