‘ತಮ್ಮ ಸುಖಾಗಮನ ಬಯಸುವ’ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ಗೆ ಜೋಡಿಯಾದ-ಸಂಜನಾ ಆನಂದ್
ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಬಹುನಿರೀಕ್ಷಿತ ‘ತಮ್ಮ ಸುಖಾಗಮನ ಬಯಸುವ’ ಚಿತ್ರಕ್ಕೆ ನಾಯಕಿಯಾಗಿ ಸಂಜನಾ ಆನಂದ್ ಆಯ್ಕೆಯಾಗಿದ್ದಾರೆ. ಈ ಮೂಲಕ ಇಬ್ಬರು ಕಲಾವಿದರು ಇದೇ ಮೊದಲ ಬಾರಿಗೆ ತೆರೆಹಂಚಿಕೊಳ್ಳುತ್ತಿದ್ದಾರೆ. ರಾಮೇನಹಳ್ಳಿ ಜಗನ್ನಾಥ್ ನಿರ್ದೇಶಿಸುತ್ತಿರುವ ಈ ಕೌಟುಂಬಿಕ ಕಥಾಹಂದರದ ಚಿತ್ರವು ಸದ್ಯ ಭರದಿಂದ ಚಿತ್ರೀಕರಣಗೊಳ್ಳುತ್ತಿದ್ದು, ಬೆಂಗಳೂರಿನಲ್ಲಿ ತನ್ನ ಮೊದಲ ಹಂತದ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ‘ಹೊಂದಿಸಿ ಬರೆಯಿರಿ’ ಚಿತ್ರದ ಮೂಲಕ ಗಮನಸೆಳೆದಿದ್ದ ರಾಮೇನಹಳ್ಳಿ ಜಗನ್ನಾಥ್, ಈ ಬಾರಿಯೂ ಭಾವನೆಗಳಿಗೆ ಒತ್ತು ನೀಡುವ ಕಥೆಯನ್ನು ಆಯ್ದುಕೊಂಡಿದ್ದಾರೆ. ಗಣೇಶ್ ಅವರ ನಟನಾ…
