ಟ್ರೇಲರ್ ನಲ್ಲೇ ಮೋಡಿ ಮಾಡಿದ ‘ಟೆರರ್’ ಏಪ್ರಿಲ್ 10ರಂದು ತೆರೆಗೆ
ಕನ್ನಡ ಚಿತ್ರರಂಗದ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರ ಸಮ್ಮುಖದಲ್ಲಿ ಟ್ರೇಲರ್ ಅನಾವರಣ .ಸಿಲ್ಕ್ ಮಂಜು, ರವಿ ಹಾಗೂ ಸ್ಮಿತಾ ವಸಿಷ್ಠ ಅವರ ನಿರ್ಮಾಣದ, ರಂಜನ್ ಶಿವರಾಮ್ ಗೌಡ ನಿರ್ದೇಶನದಲ್ಲಿ ಆದಿತ್ಯ ನಾಯಕರಾಗಿ ನಟಿಸಿರುವ “ಟೆರರ್” ಚಿತ್ರ ಆರಂಭದಿಂದ ಸಾಕಷ್ಟು ಸದ್ದು ಮಾಡುತ್ತಿದೆ. ಹಾಡುಗಳು ಹಾಗೂ ಟೀಸರ್ ಮೂಲಕ ಜನಪ್ರಿಯವಾಗಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಅದ್ದೂರಿಯಾಗಿ ಬಿಡುಗಡೆಯಾಯಿತು. ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರಸಿಂಗ್ ಬಾಬು, ಹಿರಿಯ ಕಲಾವಿದರಾದ ಜೈಜಗದೀಶ್, ವಿಜಯಲಕ್ಷ್ಮಿ ಸಿಂಗ್, ಸುಂದರರಾಜ್, ಪ್ರಮೀಳಾ ಜೋಷಾಯ್,…
