ಗುರುನಂದನ್–ತಪಸ್ವಿನಿ ಪೂಣಚ್ಛ ಅಭಿನಯದ ‘MR ಜಾಕ್’ ಚಿತ್ರದ ‘ಆರಂಭ ವಸಂತ ಆರಂಭ’ ಹಾಡು ಬಿಡುಗಡೆ
ಸುಮಂತ್ ನಿರ್ದೇಶನದ ಈ ಚಿತ್ರ ಡಿಸೆಂಬರ್ 4ರಂದು ರಾಜ್ಯಾದ್ಯಂತ ತೆರೆಗೆ ‘ಫಸ್ಟ್ ರ್ಯಾಂಕ್ ರಾಜು’ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿರುವ ಗುರುನಂದನ್ ಹಾಗೂ ‘ಪ್ರೇಮದ ಊರಲಿ’ ಚಿತ್ರದ ನಾಯಕಿ ತಪಸ್ವಿನಿ ಪೂಣಚ್ಛ ಅಭಿನಯದ ‘MR ಜಾಕ್’ ಚಿತ್ರದ ಎರಡನೇ ಹಾಡು ‘ಆರಂಭ ವಸಂತ ಆರಂಭ’ ಇತ್ತೀಚೆಗೆ ಬಿಡುಗಡೆಯಾಗಿದೆ. ಈಗಾಗಲೇ ಬಿಡುಗಡೆಯಾಗಿರು ಶೀರ್ಷಿಕೆ ಗೀತೆಗೆ ನಿರೀಕ್ಷೆಗೂ ಮೀರಿ ಮೆಚ್ಚುಗೆ ಸಿಕ್ಕಿದೆ. ಪ್ರಮೋದ್ ಮರವಂತೆ ಸಾಹಿತ್ಯ ಬರೆದಿರುವ ಈ ಹಾಡಿಗೆ ಕಿರಣ್ ರವೀಂದ್ರನಾಥ್ ಸಂಗೀತ ಸಂಯೋಜಿಸಿದ್ದು, ಜಸ್ಕರಣ್ ಸಿಂಗ್ ಹಾಡಿದ್ದಾರೆ….
