“ಬೆಂಗಳೂರಿನಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ “ಉಗ್ರಾಯುಧಮ್” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ. .
ಜಯರಾಮ್ ದೇವಸಮುದ್ರ ನಿರ್ಮಾಣದ ಪಿರಿಯಾಡಿಕ್ ಡ್ರಾಮ ಕಥಾನಕಕ್ಕೆ ಪುನೀತ್ ರುದ್ರನಾಗ್ ನಿರ್ದೇಶನ . “ನಿದ್ರಾದೇವಿ ನೆಕ್ಸ್ಟ್ ಡೋರ್” ಚಿತ್ರದ ಮೂಲಕ ನಿರ್ಮಾಪಕರಾಗಿ ಚಿತ್ರರಂಗ ಪ್ರವೇಶಿಸಿದ ಜಯರಾಮ್ ದೇವಸಮುದ್ರ ಅವರು ತಮ್ಮ ಸುರಮ್ ಮೂವೀಸ್ ಲಾಂಛನದಲ್ಲಿ “ಎಲ್ ಎಸ್ ಡಿ” ಹಾಗೂ “ನೀ ನಂಗೆ ಅಲ್ಲವಾ” ಚಿತ್ರಗಳನ್ನು ನಿರ್ಮಿಸಿದ್ದಾರೆ. ಈ ಚಿತ್ರಗಳು ಸಹ ತೆರೆಗೆ ಬರಲು ಸಿದ್ದವಾಗಿದೆ. ಪ್ರಸ್ತುತ ಜಯರಾಮ್ ದೇವಸಮುದ್ರ ಅವರು, ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ರೋರಿಂಗ್ ಸ್ಟಾರ್ ಶ್ರೀಮುರಳಿ ನಾಯಕರಾಗಿ…
