‘ತ್ರಿಬಾಣಧಾರಿ ಬಾರ್ಬರಿಕ’ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ. ಇದು ವಸಿಷ್ಠ ಸಿಂಹ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ
ಇತ್ತೀಚಿನ ದಿನಗಳಲ್ಲಿ ಹೊಸ ಆಲೋಚನೆಯ ನಿರ್ದೇಶಕರು ತಮ್ಮ ವಿಭಿನ್ನ ಮತ್ತು ವೈವಿಧ್ಯಮಯ ಕಥೆಗಳಿಂದ ಪ್ರೇಕ್ಷಕರನ್ನು ಸೆಳೆಯುತ್ತಿದ್ದಾರೆ. ಕಂಟೆಂಟ್ ಆಧಾರಿತ ಚಿತ್ರಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ವಾನರ ಸೆಲ್ಯುಲಾಯ್ಡ್ ಎಂಬ ಹೊಸ ನಿರ್ಮಾಣ ಸಂಸ್ಥೆ ಹೆಜ್ಜೆ ಇಟ್ಟಿದೆ. ಪ್ರೇಕ್ಷಕರಿಗೆ ವಿಭಿನ್ನ ಅನುಭವ ನೀಡುವ ಉದ್ದೇಶದಿಂದ ಈ ಸಂಸ್ಥೆ ಹುಟ್ಟಿಕೊಂಡಿದ್ದು, ಒಂದಿಷ್ಟು ವೈವಿಧ್ಯಮಯ ಚಿತ್ರಗಳನ್ನು ನಿರ್ಮಿಸುತ್ತಿದೆ. ಅದರ ಮೊದಲ ಹಂತವಾಗಿ, ‘ತ್ರಿಬಾಣಧಾರಿ ಬಾರ್ಬರಿಕ’ ಎಂಬ ಚಿತ್ರ ತಯಾರಾಗುತ್ತಿದ್ದು, ಈ ಚಿತ್ರವನ್ನು ವಿಜಯಪಾಲ್ ರೆಡ್ಡಿ ಅಡಿಧಲ ನಿರ್ಮಿಸಿದರೆ, ಮೋಹನ್ ಶ್ರೀವತ್ಸ…