ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಯಿತು “ಗಾಂಗೇಯ” ಚಿತ್ರದ ಹಾಡುಗಳು .
ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ‘ಗಾಂಗೇಯ’ ಸಿನೆಮಾ ತಯಾರಾಗುತ್ತಿದ್ದು, ಚಿತ್ರೀಕರಣ ಭರದಿಂದ ಸಾಗಿದೆ. ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಸಿನೆಮಾದ ಹಾಡುಗಳನ್ನು ಬಿಡುಗಡೆ ಮಾಡಲಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಮಾಜಿ ಅಧ್ಯಕ್ಷರಾದ ಭಾ.ಮ.ಹರೀಶ್, ನರಸಿಂಹಲು ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಅವರ ದೊಡ್ಡಪ್ಪ ಚೆಲುವಮೂರ್ತಿ ಮುಂತಾದ ಗಣ್ಯರು ಕನ್ನಡ ಅವತರಣಿಕೆಯ ಹಾಡುಗಳನ್ನು ಬಿಡುಗಡೆ ಮಾಡಿ ಶುಭಕೋರಿದರು. ತೆಲುಗು ಸಿನೆಮಾ ರಂಗದಲ್ಲಿ ಈಗಾಗಲೇ 10ಕ್ಕೂ ಹೆಚ್ಚು ಸಿನೆಮಾಗಳಲ್ಲಿ…