ಬಹು ನಿರೀಕ್ಷಿತ “ಘೋಸ್ಟ್” ಚಿತ್ರ ಅಕ್ಟೋಬರ್ 19 ರಂದು ತೆರೆಗೆ .
ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಿಸಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ “ಘೋಸ್ಟ್” ಚಿತ್ರ ಅಕ್ಟೋಬರ್ 19 ರಂದು ದೇಶಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ನಾನು ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಟಿಸಿರುವ ಮೂರನೇ ಚಿತ್ರವಿದು. ವಿಶೇಷವೆಂದರೆ ನಾನು ಈ ಚಿತ್ರದಲ್ಲಿ ಮೂರು ಶೇಡ್ ಗಳಲ್ಲಿ ಕಾಣಿಸಿಕೊಂಡಿದ್ದೇನೆ. ನಾನು ಈವರೆಗೂ ಮಾಡಿರದ ಪಾತ್ರವೆನ್ನಬಹುದು. ಶ್ರೀನಿ ನಿರ್ದೇಶನ, ಮಹೇಂದ್ರ ಸಿಂಹ ಅವರ…