ನವರಸನ್ ಸಾರಥ್ಯದ MMB legacy ಗೆ ಮೊದಲ ವರ್ಷದ ಸಡಗರ .ಇದೇ ಸಂದರ್ಭದಲ್ಲಿ ಅನಾವರಣವಾಯಿತು ಮೈ ಮೂವೀ ಬಜಾರ್ ನ ಪ್ರಶಸ್ತಿಯ ಲೋಗೊ.
ಕನ್ನಡ ಚಿತ್ರರಂಗದ ಇವೆಂಟ್ ಹಾಗೂ ಪತ್ರಿಕಾಗೋಷ್ಠಿಗಳನ್ನು ನಡೆಸಲು ಸುಸಜ್ಜಿತವಾದ ಸಭಾಂಗಣ MMB legacy ಆರಂಭವಾಗಿ ಒಂದು ವರ್ಷಗಳಾಗಿದೆ. ಈ ಸಂಭ್ರಮವನ್ನು ಸಂಭ್ರಮಿಸಲು ಎಂ.ಎಂ.ಬಿ ಲೆಗಸಿಯ ಮುಖ್ಯಸ್ಥ ನವರಸನ್ ಅದ್ದೂರಿ ಸಮಾರಂಭ ಆಯೋಜಿಸಿದ್ದರು. ಇದೇ ಸಂದರ್ಭದಲ್ಲಿ ಮೈ ಮೂವೀ ಬಜಾರ್ ಪ್ರಶಸ್ತಿ ಲೋಗೊ ಸಹ ಅನಾವರಣವಾಯಿತು. ವಿನೋದ್ ಪ್ರಭಾಕರ್, ಅಭಿಷೇಕ್ ಅಂಬರೀಶ್, ಚಂದನ್ ಶೆಟ್ಟಿ, ಸಂಜನಾ ಆನಂದ್, ಅಪೂರ್ವ ಸೇರಿ ಮೈ ಮೂವೀ ಬಜಾರ್ ನ ಪ್ರಶಸ್ತಿ ಅನಾವರಣ ಮಾಡಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್…