ಬಹು ನಿರೀಕ್ಷಿತ “ಬಿಂಗೊ” ಚಿತ್ರಕ್ಕೆ ಮಾತಿನ ಜೋಡಣೆ(ಡಬ್ಬಿಂಗ್) ಮುಕ್ತಾಯ. .ಇದು ಆರ್ ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ ಅಭಿನಯದ ಚಿತ್ರ .

“ಶಂಭೋ ಶಿವ ಶಂಕರ” ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶನದಲ್ಲಿ, ಆರ್ ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ ನಾಯಕ – ನಾಯಕಿಯಾಗಿ ನಟಿಸಿರುವ “ಬಿಂಗೊ” ಚಿತ್ರದ ಡಬ್ಬಿಂಗ್ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ನ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ. ಮೇ 24 ರಂದು ನಟಿ ರಾಗಿಣಿ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ “ಬಿಂಗೊ” ಚಿತ್ರತಂಡ ರಾಗಿಣಿ ಅವರಿಗೆ ಶುಭಾಶಯ ತಿಳಿಸಿದೆ.

ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ರಾಗಿಣಿ ದ್ವಿವೇದಿ, ಆರ್ ಕೆ ಚಂದನ್ , ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್), ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಹಿತನ್ ಹಾಸನ್ ಸಂಗೀತ ನೀಡಿರುವ ಮೂರು ಹಾಡುಗಳು ಈ ಚಿತ್ರದಲ್ಲಿದೆ. ಸದ್ಯದಲ್ಲೇ ಹಾಡುಗಳು ಹಾಗೂ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿದ್ದು, ನರಸಿಂಹ ಸಾಹಸ ನಿರ್ದೇಶನ ಮಾಡಿದ್ದಾರೆ. ಕಂಬಿ ರಾಜು ಅವರ ನೃತ್ಯ ನಿರ್ದೇಶನ ಹಾಗೂ ವೆಂಕಿ udv ಸಂಕಲನ “ಬಿಂಗೊ” ಚಿತ್ರಕ್ಕಿದೆ.

Similar Posts

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments