ಈ ವಾರ ತೆರೆಗೆ ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ “ತಿಮ್ಮನ ಮೊಟ್ಟೆಗಳು.”

ರಕ್ಷಿತ್ ತೀರ್ಥಹಳ್ಳಿಯವರ ಬರವಣಿಗೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ “ತಿಮ್ಮನ ಮೊಟ್ಟೆಗಳು” ಚಿತ್ರ ಈ ವಾರ ಜೂನ್ 27 ರಂದು ರಾಜ್ಯಾದ್ಯಂತ ತೆರೆಕಾಣುತ್ತಿದೆ.

ಶ್ರೀಕೃಷ್ಣ ಪ್ರೊಡಕ್ಸನ್ಸ್ ಬ್ಯಾನರ್ ಅಡಿಯಲ್ಲಿ ಆದರ್ಶ್ ಅಯ್ಯಂಗಾರ್ ಚೊಚ್ಚಲ ನಿರ್ಮಾಣದ ಹಾಗೂ ರಕ್ಷಿತ್ ತೀರ್ಥಹಳ್ಳಿಯವರೇ ಬರೆದ “ಕಾಡಿನ ನೆಂಟರು” ಕಥಾ ಸಂಕಲನದಿಂದ ಆಯ್ದ ಒಂದು ಕಥೆ “ತಿಮ್ಮನ ಮೊಟ್ಟೆಗಳು” ಸಿನಿಮಾವಾಗಿದೆ.

ಇತ್ತೀಚೆಗೆ ಅಮೇರಿಕಾದ ಡಾಲಸ್ ನಲ್ಲಿ ಈ ಚಿತ್ರದ ಪ್ರಿಮೀಯರ್ ಶೋ ನಡೆದಿದ್ದು, ಅಲ್ಲಿನ ಜನರು “ತಿಮ್ಮನ ಮೊಟ್ಟೆಗಳು” ಚಿತ್ರ ನೋಡಿ ಫಿದಾ ಆಗಿದ್ದಾರೆ. ಇಲ್ಲೂ ಕೂಡ ನಮ್ಮ ಚಿತ್ರ ಯಶಸ್ವಿಯಾಗಲಿದೆ ಎಂಬ ಭರವಸೆ ಚಿತ್ರತಂಡದು. ಈಗಾಗಲೇ ಹಲವು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೂ “ತಿಮ್ಮನ ಮೊಟ್ಟೆಗಳು” ಪ್ರದರ್ಶನಗೊಂಡು ಪ್ರಶಂಸೆ ಹಾಗೂ ಪ್ರಶಸ್ತಿ ಗಳಿಸಿದೆ.

ಪ್ರಕೃತಿ ಮತ್ತು ಮನುಷ್ಯನ ನಡುವಿನ ಸೂಕ್ಷ್ಮಸಂವೇದನೆಗಳನ್ನೊಳಗೊಂಡ ಈ ಚಿತ್ರದ ಪ್ರಮುಖ ಪಾತ್ರವರ್ಗದಲ್ಲಿ ಕೇಶವ್ ಗುತ್ತಳಿಕೆ, ಸುಚೇಂದ್ರ ಪ್ರಸಾದ್, ಆಶಿಕಾ ಸೋಮಶೇಖರ್, ಶೃಂಗೇರಿ ರಾಮಣ್ಣ, ಪ್ರಗತಿ ಪ್ರಭು, ರಘು ರಾಮನಕೊಪ್ಪ, ಮಾಸ್ಟರ್ ಹರ್ಷ, ವಿನಯ್ ಕಣಿವೆ, ಪೃಥ್ವಿರಾಜ್ ಕೊಪ್ಪ, ಪ್ರಾಣೇಶ್ ಕೂಳೆಗದ್ದೆ ಮುಂತಾದವರಿದ್ದಾರೆ. ಪ್ರವೀಣ್ ಎಸ್ ಅವರ ಛಾಯಾಗ್ರಹಣ, ಕೆಂಪರಾಜು ಬಿ ಎಸ್ ಅವರ ಸಂಕಲನ ಹಾಗೂ ಹೇಮಂತ್ ಜೋಯಿಷ್ ಅವರ ಸಂಗೀತ ಸಂಯೋಜನೆ “ತಿಮ್ಮನ ಮೊಟ್ಟೆಗಳು” ಚಿತ್ರಕ್ಕಿದೆ.

Similar Posts

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments