“ಆದಿಪರ್ವ”ದ ಮೂಲಕ ಖ್ಯಾತ ನಟ ಮೋಹನ್ ಬಾಬು ಪುತ್ರಿ ಮಂಚು ಲಕ್ಷ್ಮೀ ಕನ್ನಡಕ್ಕೆ .

ತೆಲುಗಿನ ಸೂಪರ್ ಸ್ಟಾರ್ ಮೋಹನ್ ಬಾಬು ಅವರ ಮಗಳು ಮಂಚು ಲಕ್ಷ್ಮೀ “ಆದಿಪರ್ವ” ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.

ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗಿರುವ “ಆದಿಪರ್ವ” ಚಿತ್ರವನ್ನು, ಸಂಜೀವ್ ಕುಮಾರ್ ಮೆಗೋಟಿ ನಿರ್ದೇಶಿಸಿದ್ದಾರೆ. ರವಿ ಕಿರಣ್ ನಿರ್ದೇಶನದ “ಬದುಕು” ಚಿತ್ರಕ್ಕೆ ಚಿತ್ರಕಥೆ – ಸಂಭಾಷಣೆ ಬರೆಯುವ ಮೂಲಕ ಕನ್ನಡಿಗರಿಗೆ ಪರಿಚಯರಾದ ಸಂಜೀವ್ ಕುಮಾರ್ ಮೆಗೋಟಿ, ಪೂಜಾ ಗಾಂಧಿ ಅಭಿನಯದ “ಆಪ್ತ”, “ದಂಡು”, “ಕ್ಯೂ”, ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಕಳೆದ 8 ವರ್ಷಗಳಲ್ಲಿ ತೆಲುಗು ಮತ್ತು ಕನ್ನಡ ಸೇರಿದಂತೆ ಅನೇಕ ಭಾಷೆಗಳ ಸುಮಾರು 50ಕ್ಕೂ ಹೆಚ್ಚು ಧಾರಾವಾಹಿಗಳಿಗೆ ಕಥೆ – ಚಿತ್ರ ಕಥೆಯನ್ನು ನೀಡುವುದರ ಜೊತೆಗೆ, ತಮ್ಮದೇ ಬ್ಯಾನರ್ ಅಡಿಯಲಿ ಧಾರಾವಾಹಿಗಳನ್ನು ನಿರ್ಮಿಸುತ್ತಿದ್ದಾರೆ. ಬಹಳ ದಿನಗಳ ನಂತರ ಹಿರಿತೆರೆಗೆ ಮರಳಿದ್ದಾರೆ.

ಅನ್ವಿಕ ಆರ್ಟ್ಸ್ ಮತ್ತು ಅಮೇರಿಕಾ – ಇಂಡಿಯಾ ಎಂಟರ್‌ಟೈನ್‌ಮೆಂಟ್ (ಎ.ಐ ಎಂಟರ್‌ಟೈನ್‌ಮೆಂಟ್ ) ಬ್ಯಾನರ್ ಅಡಿಯಲ್ಲಿ ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ “ಆದಿಪರ್ವ” ಚಿತ್ರ ತೆರೆಗೆ ಬರಲು ಸಿದ್ಧವಾಗುತ್ತಿದೆ.

ಮಂಚು ಲಕ್ಷಿ, ಎಸ್ತರ್, ಸತ್ಯಪ್ರಕಾಶ್ ಸೇರಿದಂತೆ ಕನ್ನಡ, ತಮಿಳು, ಮಲಯಾಳಂ, ಮರಾಠಿ ಮತ್ತು ಹಿಂದಿ ಚಿತ್ರರಂಗದ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಕನ್ನಡದವರಾದ ಹರೀಶ್ ಅವರ ಛಾಯಗ್ರಹಣವಿರುವ “ಆದಿಪರ್ವ” ಚಿತ್ರಕ್ಕೆ ರಾಮ್ ಸುಧಿ (ಸುಧೀಂದ್ರ) ಆದಿ ಪರ್ವ ಚಿತ್ರಕ್ಕೆ ಸಂಭಾಷಣೆ ಮತ್ತು ಸಾಹಿತ್ಯವನ್ನು ರಚಿಸಿದ್ದಾರೆ.

ಬಹು ತಾರಾಗಣದಲ್ಲಿ ಸಿದ್ಧವಾಗಿರುವ “ಆದಿಪರ್ವ” ಸಿನಿಮಾ ಎರಡು ಭಾಗಗಳಲ್ಲಿ ಪ್ರೇಕ್ಷಕರನ್ನು ತಲುಪಲಿದೆ. ಮಾರ್ಚ್ 8 ಮಹಾ ಶಿವರಾತ್ರಿ ಹಬ್ಬದಂದು, ಚಿತ್ರದ ಟ್ರೇಲರ್ ಹಾಗೂ ಒಂದು ಹಾಡುನ್ನು ಬಿಡುಗಡೆ ಮಾಡುವ ಸಿದ್ಧತೆಯಲ್ಲಿ ಚಿತ್ರತಂಡವಿದೆ. ಏಪ್ರಿಲ್ ಎರಡನೇ ವಾರದಲ್ಲಿ 5 ಭಾಷೆಗಳಲ್ಲಿ ಈ ಪ್ಯಾನ್ ಇಂಡಿಯಾ ಚಿತ್ರ ತೆರೆಗೆ ಬರಲಿದೆ.

Similar Posts

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments